HEALTH TIPS

ರಾಹುಲ್ ಗಾಂಧಿ ಮದ್ಯ ಅಥವಾ ಡ್ರಗ್ಸ್ ಸೇವಿಸಿ ಸಂಸತ್ತಿಗೆ ಬರುತ್ತಾರೆ: ಕಂಗನಾ ರನೌತ್

       ವದೆಹಲಿ: ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹಿಮಾಚಲ ಪ್ರದೇಶದ ಸಂಸದೆ, ನಟಿ ಕಂಗನಾ ರನೌತ್‌ ಹೇಳಿದ್ದಾರೆ.

       ರಾಹುಲ್‌ ಗಾಂಧಿ ಅವರು 'ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ' ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ.

          ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್‌ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ? ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ  ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು' ಎಂದು ಕಿಡಿಕಾರಿದ್ದಾರೆ.

ಮುಂದುವರಿದು, 'ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ. ಅವರು ಯಾವುದೇ ರೀತಿಯ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು ಎಂದು ನನಗನಿಸುತ್ತದೆ' ಎಂದಿದ್ದಾರೆ.


                 'ನಾನು ನೂತನ ಸದಸ್ಯೆಯೇ ಇರಬಹುದು. ಆದರೆ, ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ನೀಡುವ ಹೇಳಿಕೆಗಳನ್ನು ನೋಡಿ ಸಂಪೂರ್ಣವಾಗಿ ಆಘಾತಗೊಂಡಿದ್ದೇನೆ. ವ್ಯಕ್ತಿಯೊಬ್ಬರು ಸಂಸತ್ತಿನಲ್ಲಿ ಈಶ್ವರನ ಭಾರತ ಮತ್ತು ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದರೆ, ಆತನನ್ನು ಮಾದಕ ದ್ರವ್ಯ ಸೇವನೆ ಪರೀಕ್ಷೆಗೊಳಪಡಿಸಬೇಕು ಎನಿಸುವುದಿಲ್ಲವೇ? ಅವರು ಸಂಸತ್ತಿಗೆ ಮದ್ಯ ಸೇವಿಸಿ ಅಥವಾ ಮಾದಕ ದ್ರವ್ಯದ ಮತ್ತಿನಲ್ಲೇ ಬರುತ್ತಾರೆ. ಅದು ಉತ್ತಮ ನಡೆ ಎಂದು ನನಗನಿಸುವುದಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

             ರಾಹುಲ್‌ ಅವರು ಮಾದಕ ವಸ್ತು ಸೇವಿಸುತ್ತಾರೆ ಎಂದು ಆರೋಪಿಸುತ್ತಿದ್ದೀರಾ ಎಂದು ಕೇಳಿದ್ದಕ್ಕೆ, 'ಇಂತಹ ಹೇಳಿಕೆ ನೀಡುವ ವ್ಯಕ್ತಿಗಳು ತಮ್ಮ ಹಿಡಿತದಲ್ಲಿ ತಾವಿದ್ದಾರೆ ಎಂದು ಭಾವಿಸುತ್ತೀರಾ' ಎಂದು ಮರು ಪ್ರಶ್ನೆ ಎಸೆದಿದ್ದಾರೆ.

             ಮಹಾಭಾರತದಲ್ಲಿ ಬರುವ 'ಚಕ್ರವ್ಯೂಹ' ಯುದ್ಧ ಸನ್ನಿವೇಶವನ್ನು ಉಲ್ಲೇಖಿಸಿ ಇತ್ತೀಚೆಗೆ ಸಂಸತ್ತಿನಲ್ಲಿ ಮಾತನಾಡಿದ್ದ ರಾಹುಲ್‌, 'ಸಾವಿರಾರು ವರ್ಷಗಳ ಹಿಂದೆ ಹರಿಯಾಣದ ಕುರುಕ್ಷೇತ್ರದಲ್ಲಿ ಆರು ಮಂದಿ ಸೇರಿ ಚಕ್ರವ್ಯೂಹ ರಚಿಸಿ ಅಭಿಮನ್ಯುವನ್ನು ಕೊಲೆ ಮಾಡಿದ್ದರು. ಚಕ್ರವ್ಯೂಹ ಎಂದರೆ ಭಯ ಹಾಗೂ ಹಿಂಸೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ಉದ್ಯಮಪತಿಗಳಾದ ಅಂಬಾನಿ ಹಾಗೂ ಅದಾನಿ ಸೇರಿ ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಿದ್ದಾರೆ. ಚಕ್ರವ್ಯೂಹವನ್ನು ಪದ್ಮವ್ಯೂಹವೆಂದೂ ಕರೆಯುತ್ತಾರೆ. ಅದು ಕಮಲದ ಹೂವಿನ ಹಾಗೆ ಕಾಣಿಸುತ್ತದೆ. ಕಮಲದ ಹೂವಿನ ಚಿತ್ರವನ್ನು ಪ್ರಧಾನಿ ಮೋದಿಯವರು ಎದೆಗೆ ಸಿಕ್ಕಿಸಿಕೊಂಡು ಓಡಾಡುತ್ತಾರೆ' ಎಂದು ಅವರು ಹೇಳಿದ್ದರು.

                ಹಾಗೆಯೇ, 'ನೀವು ಚಕ್ರವ್ಯೂಹವನ್ನು ರಚಿಸುತ್ತೀರಿ. ನಾವು ಅದನ್ನು ಜಾತಿಗಣತಿ ಮೂಲಕ ಬೇಧಿಸುತ್ತೇವೆ‌' ಎಂದು ವಾಗ್ದಾಳಿ ನಡೆಸಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries