HEALTH TIPS

ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

          ಕುಂಬಳೆ:  ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಸೋಮವಾರ ಜರಗಿತು. ಅಭಿಷೇಕ್ ಮಹೇಶ್  ಸೂರಂಬೈಲು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀಕೃಷ್ಣನ ಬಾಲಲೀಲೆಗಳನ್ನು ವರ್ಣಿಸುತ್ತಾ ಕೃಷ್ಣನ ಸಂದೇಶ ನಮ್ಮ ಜೀವನವನ್ನು ಪಾವನಗೊಳಿಸಲಿ ಎಂಬ ಸದಾಶಯ ವ್ಯಕ್ತಪಡಿಸಿದರು. 


         ಶಿಶುಮಂದಿರದ ಪುಟಾಣಿಗಳು ಮುದ್ದುಕೃಷ್ಣರಾಗಿ ನೆರೆದವರ ಮನಸ್ಸಿಗೆ ಮುದ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಿತು. ಕೃμÁ್ಣಷ್ಟಮಿ ಪ್ರಯುಕ್ತ ನಡೆಸಿದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ  ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ, ಮುಖ್ಯೋಪಾಧ್ಯಾಯ ಶ್ಯಾಮ ಭಟ್ ಧರ್ಬೆಮಾರ್ಗ, ಸಹಮುಖ್ಯ ಶಿಕ್ಷಕಿ ಚಿತ್ರಾಸರಸ್ವತಿ ಪೆರಡಾನ ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಚಿತ್ತಾರ ಸ್ವಾಗತಿಸಿ, ಲಿಶಿತಾ ವಂದಿಸಿದರು. 





Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries