HEALTH TIPS

ನಾಡಿನ ಅಭಿವೃದ್ಧಿಯಲ್ಲಿ ಬಂಟ ಸಮಾಜ ಕೊಡುಗೆ ಅನನ್ಯ - ಸುಬ್ಬಯ್ಯ ರೈ: ಬದಿಯಡ್ಕದಲ್ಲಿ ಬಂಟೆರೆ ಆಟಿದ ಕೂಟ; ತಿಂಡಿ ತಿನಿಸುಗಳ ಪ್ರದರ್ಶನ

            ಬದಿಯಡ್ಕ: ನಾಡಿನ ಅಭಿವೃದ್ಧಿಗೆ ಬಂಟ ಸಮಾಜದ ಕೊಡುಗೆ ಅನನ್ಯವಾಗಿದೆ. ಸಮಾಜದ ಬಂಧುಗಳು ಒಗ್ಗಟ್ಟಾಗಿ ಸಂಘಟನೆಯನ್ನು ಬಲಪಡಿಸಬೇಕು. ಮಹಿಳೆಯರೂ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮುಂಚೂಣಿಗೆ ಬರಬೇಕು ಎಂದು ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ವಕೀಲ ಸುಬ್ಬಯ್ಯ ರೈ ಅಭಿಪ್ರಾಯಪಟ್ಟರು.

               ಬದಿಯಡ್ಕ ಬಂಟರ ಸಂಘದ ನೇತೃತ್ವದಲ್ಲಿ ಭಾನುವಾರ ಬದಿಯಡ್ಕ ನವಜೀವನ ಶಾಲಾ ಸಭಾಂಗಣದಲ್ಲಿ ಜರಗಿದ ಬಂಟೆರೆ ಆಟಿದ ಕೂಟ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. 


         ಬದಿಯಡ್ಕ ಬಂಟರ ಸಂಘದ ಅಧ್ಯಕ್ಷ ನಿರಂಜನ ರೈ ಪೆರಡಾಲ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ದಯಾನಂದ ರೈ ಕಳುವಾಜೆ ಬಂಟ ಸಮಾಜದಲ್ಲಿ ಆಟಿ ತಿಂಗಳ ವಿಶೇಷತೆ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು. ಜಿಲ್ಲಾ ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ ರೈ ಪೆರಡಾಲ ಗುತ್ತು, ಜಿಲ್ಲಾ ಉಪಾಧ್ಯಕ್ಷೆ ಶ್ಯಾಮಲ ಶೆಟ್ಟಿ ಕಾಸರಗೋಡು, ಕುಂಬಳೆ ಫಿರ್ಕಾ ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಳಮಲೆ, ಪ್ರಧಾನ ಕಾರ್ಯದರ್ಶಿ ಅಶೋಕ್ ರೈ ಕೊರೆಕ್ಕಾನ, ಮಾಜಿ ಬ್ಲಾಕ್ ಪಂಚಾಯಿತಿ ಸದಸ್ಯ ರಮಾನಾಥ ರೈ ಮೇಗಿನಕಡಾರು, ಕುಂಬಳೆ ಫಿರ್ಕಾ ಬಂಟರ ಸಂಘದ ಜಂಟಿ ಕಾರ್ಯದರ್ಶಿಗಳಾದ ಗಿರೀಶ್ ರೈ ವಳಮಲೆ, ರವೀಂದ್ರನಾಥ ಶೆಟ್ಟಿ ವಳಮಲೆ, ಬದಿಯಡ್ಕ ಬಂಟರ ಸಂಘದ ಉಪಾಧ್ಯಕ್ಷ ಜಗನ್ನಾಥ ರೈ ಕೊರೆಕ್ಕಾನ, ಗುತ್ತಿಗೆದಾರ ನವೀನ್ ಶೆಟ್ಟಿ ಬೇಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.


 ಆಟಿದ ಕೂಟ :

           ಆಟಿದಕೂಟ ಕಾರ್ಯಕ್ರಮದ ಅಂಗವಾಗಿ ಸಮಾಜದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನ ನಡೆಯಿತು. ಭಜನೆ, ರಸಪ್ರಶ್ನೆ ಮೊದಲಾದ ಸ್ಪರ್ಧೆಗಳಲ್ಲಿ ಪಾಲ್ಗೊಂಡವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಅವಿನಾಶ್ ರೈ ಅವರನ್ನು ಅಭಿನಂದಿಸಲಾಯಿತು. ಹೈದರಾಬಾದಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಜೂನಿಯರ್ ವಿಭಾಗದ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ ಮೈತ್ರಿ ರೈ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕುಮಾರಿ ಶ್ರದ್ಧಾ ರೈ, ಕೃತಿ ರೈ ಪ್ರಾರ್ಥನೆ ಹಾಡಿದರು. ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ಸ್ವಾಗತಿಸಿ, ಕೋಶಾಧಿಕಾರಿ ದಯಾನಂದ ರೈ ಕಡಾರು ವಂದಿಸಿದರು. ಶಿಕ್ಷಕಿ ಅಶ್ವಿನಿ ಪ್ರದೀಪ್ ಶೆಟ್ಟಿ ಬೇಳ ನಿರೂಪಿಸಿದರು.      


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries