ನವದೆಹಲಿ: ತಮ್ಮ ಭವಿಷ್ಯದ ಯೋಜನೆಗಳಿಗೆ ತಕ್ಕಂತೆ ಮುಂದುವರಿಯುವುದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಿಟ್ಟದ್ದು ಎಂದು ಭಾರತ ವಿದೇಶಾಂಗ ಸಚಿವಾಲಯ ಗುರುವಾರ ಹೇಳಿದೆ.
ನವದೆಹಲಿ: ತಮ್ಮ ಭವಿಷ್ಯದ ಯೋಜನೆಗಳಿಗೆ ತಕ್ಕಂತೆ ಮುಂದುವರಿಯುವುದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಿಟ್ಟದ್ದು ಎಂದು ಭಾರತ ವಿದೇಶಾಂಗ ಸಚಿವಾಲಯ ಗುರುವಾರ ಹೇಳಿದೆ.
ಅವರ (ಹಸೀನಾ) ಯೋಜನೆಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆ ಕುರಿತು ಮಾತನಾಡುವುದು ಸಮಂಜಸವೂ ಅಲ್ಲ ಎಂದು ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇದಕ್ಕೂ ಮೊದಲು ಎಕ್ಸ್/ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿರುವ ಎಸ್. ಜೈಶಂಕರ್, ಬಾಂಗ್ಲಾದೇಶ ಮತ್ತು ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ಕುರಿತು ಬ್ರಿಟನ್ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಮೀಸಲಾತಿ ವಿಚಾರವಾಗಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಂಗೆಯ ಹಿಂದೆ ಪಾಕಿಸ್ತಾನದ ಐಎಸ್‌ಐ ಕೈವಾಡವಿದೆ ಎಂದು ಹಸೀನಾ ಪುತ್ರ ಸಜೀದ್ ವಾಜೆದ್ ಜಾಯ್ ಆರೋಪಿಸಿದ್ದಾರೆ.
ತಮ್ಮ ವಿರುದ್ಧದ ಆಕ್ರೋಶ ತೀವ್ರಗೊಳ್ಳುತ್ತಿದ್ದಂತೆ ಹಾಗೂ ರಾಜೀನಾಮೆ ಬೇಡಿಕೆ ಬಲಗೊಳ್ಳುತ್ತಿದ್ದಂತೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದಿರುವ ಹಸೀನಾ, ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.