ಮಧೂರು: ಮಧೂರು ಗ್ರಾಮ ಪಂಚಾಯತಿಯಲ್ಲಿ ವಿಶೇಷ ಗ್ರಾಮ ಸಭೆ ನಡೆಯಿತು. ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಗೋಪಾಲಕೃಷ್ಣ ಉದ್ಘಾಟಿಸಿದರು. ಆರೋಗ್ಯ ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಗಟ್ಟಿ ಅಧ್ಯಕ್ಷತೆ ವಹಿಸಿದರು. ಕ್ಷೇಮಕಾರ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಯಶೋದಾ ನಾೈಕ್, ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀಮತಿ, ಜನನಿ, ಹಬೀಬ್ ಚೆಟ್ಟುಂಗುಯಿ, ಉದಯ ಕುಮಾರ್, ಬಶೀರ್, ಜಲೀಲ್, ಪಂಚಾಯತಿ ಕಾರ್ಯದರ್ಶಿ ಅಜಯನ್, ಜೂನಿಯರ್ ಸುಪರಿಂಟೆಂಡೆಂಟ್ ದಿನೇಶ್, ಟಿ.ಎ.ಪ್ರಜ್ವಲ್ ಉಪಸ್ಥಿತರಿದ್ದರು. ಎಸ್‍ಎಸ್‍ಎಲ್‍ಸಿ, ಪ್ಲಸ್ ಟು ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.