HEALTH TIPS

ಜಮ್ಮು-ಕಾಶ್ಮೀರ ಚುನಾವಣೆ ಹೊತ್ತಲ್ಲಿ ಮಹತ್ವದ ಕ್ರಮ; ಲಡಾಖ್‌ಗೆ ಐದು ಹೊಸ ಜಿಲ್ಲೆ

           ವದೆಹಲಿ: ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ತಿಳಸಿದ್ದಾರೆ.

          ಹೊಸ ಜಿಲ್ಲೆಗಳಿಗೆ ಝನ್‌ಸ್ಕರ್‌, ದ್ರಾಸ್‌, ಶಾಮ್‌, ನುಬ್ರಾ ಮತ್ತು ಛಾಂಗ್‌ಥಂಗ್‌ ಎಂದು ಹೆಸರಿಸಲಾಗುವುದು ಎಂದೂ ಹೇಳಿದ್ದಾರೆ.

             ಈ ಸಂಬಂಧ ಎಕ್ಸ್‌/ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಅಭಿವೃದ್ಧಿ ಹೊಂದಿದ ಹಾಗೂ ಸಮೃದ್ಧ ಲಡಾಖ್‌ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಂತೆ, ಕೇಂದ್ರಾಡಳಿತ ಪ್ರದೇಶದಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಕೇಂದ್ರ ಗೃಹ ಸಚಿವಾಲಯ ತೀರ್ಮಾನಿಸಿದೆ. ಹೊಸ ಜಿಲ್ಲೆಗಳಾದ ಝನ್‌ಸ್ಕರ್‌, ದ್ರಾಸ್‌, ಶಾಮ್‌, ನುಬ್ರಾ ಮತ್ತು ಛಾಂಗ್‌ಥಂಗ್‌ನ ಪ್ರತಿ ಮೂಲೆ ಮೂಲೆಗೂ ಆಡಳಿತವನ್ನು ವಿಸ್ತರಿಸುವ ಮೂಲಕ ಜನರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು' ಎಂದು ತಿಳಿಸಿದ್ದಾರೆ.


             ಹಾಗೆಯೇ, 'ಲಡಾಖ್‌ ಜನರಿಗೆ ಹೇರಳ ಅವಕಾಶಗಳನ್ನು ಕಲ್ಪಿಸಲು ಮೋದಿ ಸರ್ಕಾರ ಬದ್ಧವಾಗಿದೆ' ಎಂದೂ ಹೇಳಿದ್ದಾರೆ.

ಚುನಾವಣೆ ಹೊತ್ತಲ್ಲಿ ಕ್ರಮ
         ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರವು 2019ರ ಆಗಸ್ಟ್‌ 5ರಂದು ರದ್ದುಪಡಿಸಿತ್ತು. ಜೊತೆಗೆ, ರಾಜ್ಯವನ್ನು 'ಜಮ್ಮು ಮತ್ತು ಕಾಶ್ಮೀರ' ಹಾಗೂ 'ಲಡಾಖ್‌' ಎಂದು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.

               ಇದೀಗ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಅಲ್ಲಿನ 90 ವಿಧಾನಸಭಾ ಕ್ಷೇತ್ರಗಳಿಗೆ ಸೆಪ್ಟೆಂಬರ್‌ 18, 25 ಹಾಗೂ ಅಕ್ಟೋಬರ್‌ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

                ಈ ಬೆಳವಣಿಗೆ ನಡುವೆ ಲಡಾಖ್‌ನಲ್ಲಿ ಹೊಸ ಜಿಲ್ಲೆಗಳನ್ನು ರಚಿಸುವ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.

               ಇದರಿಂದಾಗಿ ಲಡಾಖ್‌ನಲ್ಲಿ ಜಿಲ್ಲೆಗಳ ಸಂಖ್ಯೆ 7ಕ್ಕೆ ಏರಲಿದೆ. ಈವರೆಗೆ ಕಾರ್ಗಿಲ್‌ ಮತ್ತು ಲೇಹ್‌ ಮಾತ್ರವೇ ಇದ್ದವು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries