ಕೊಚ್ಚಿ: ವಯನಾಡು ದುರಂತದ ಹೆಸರಿನಲ್ಲಿ ಹಣ ವಸೂಲಿ ಮಾಡುವುದನ್ನು ನಿಯಂತ್ರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಚಲನಚಿತ್ರ ನಟ, ವಕೀಲ ಹಾಗೂ ಕಾಸರಗೋಡು ಮೂಲದ ಸಿ.ಶುಕೂರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25,000 ರೂಪಾಯಿ ಪಾವತಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿದೆ.
ಅರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಏನು ಎಂದು ಹೈಕೋರ್ಟ್ ವಿಚಾರಣೆ ನಡೆಸಿತು ಮತ್ತು ದೇಣಿಗೆ ನೀಡುವ ಜನರ ಉದ್ದೇಶವನ್ನು ಏಕೆ ಅನುಮಾನಿಸಬೇಕು ಎಂದು ವಕೀಲರನ್ನು ಕೇಳಿದೆ. ವಯನಾಡು ದುರಂತದ ಹೆಸರಿನಲ್ಲಿ ನಡೆದಿರುವ ಹಣ ವಸೂಲಿ ಮತ್ತಿತರ ಕೆಲಸಗಳು ಸರ್ಕಾರದ ಕಣ್ಗಾವಲಿನಲ್ಲಿ ನಡೆಯಬೇಕು ಎಂದು ಆಗ್ರಹಿಸಿ ವಕೀಲ ಶುಕೂರ್ ಸಲ್ಲಿಸಿದ್ದ ಅರ್ಜಿಯಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಿತ್ತು.
ವಯನಾಡ್ ಭೂಕುಸಿತದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಹಣ ಸಂಗ್ರಹಿಸಿವೆ ಮತ್ತು ಪಾರದರ್ಶಕತೆ ತರಲು ಸರ್ಕಾರವು ಮೇಲ್ವಿಚಾರಣೆ ಮಾಡಬೇಕು ಎಂದು ವಕೀಲರು ವಾದಿಸಿದ್ದರು. ಸಂಘ ಸಂಸ್ಥೆಗಳಿಂದ ಹಣ ಸಂಗ್ರಹಿಸುವುದನ್ನು ತಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿತ್ತು. ಈ ಅರ್ಜಿಯನ್ನು ಹೈಕೋರ್ಟ್ ದಂಡದೊಂದಿಗೆ ವಜಾಗೊಳಿಸಿದೆ.