ತಿರುವನಂತಪುರಂ: ಲಕ್ಷದ್ವೀಪದಲ್ಲಿ ಚಂಡಮಾರುತವು ಮಧ್ಯ-ಪೂರ್ವ ಅರಬ್ಬಿ ಸಮುದ್ರದಲ್ಲಿ ಕರ್ನಾಟಕ-ಗೋವಾ ಕರಾವಳಿಯಲ್ಲಿ ಕಡಿಮೆ ಒತ್ತಡವಾಗಿ ಬಲಗೊಂಡಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಇದರ ಪರಿಣಾಮ ಮುಂದಿನ 5 ದಿನಗಳ ಕಾಲ ಕೇರಳದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 24 ರ ವೇಳೆಗೆ ಉತ್ತರ ಬಂಗಾಳ ಕೊಲ್ಲಿಯಲ್ಲಿ ಹೊಸ ಚಂಡಮಾರುತವು ರೂಪುಗೊಳ್ಳುವ ಸಾಧ್ಯತೆಯಿದೆ. ಹಾಗಾಗಿ ಆ.25ರ ವರೆಗೆ ರಾಜ್ಯದ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.