ಕಾಸರಗೋಡು: ರಾಜಾಪುರಂ ಕಳ್ಳಾರು ನಿವಾಸಿ, ರಾಜಾಪುರಂ ಪೊಲೀಸ್ ಠಾಣೆ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಕೆ.ಚಂದ್ರನ್(50)ಹೃಷದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಗಳವಾರ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು, ರಾತ್ರಿ 8ರ ವಏಳೆಗೆ ಅಸೌಖ್ಯ ಕಾಣಿಸಿಕೊಂಡಿತ್ತು. ತಕ್ಷಣ ಇವರನ್ನು ಪನತ್ತಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಘಿರಲಿಲ್ಲ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಠಾಣೆ ವಠಾರದಲ್ಲಿ ನಡೆದ ಶುಚೀಕರಣ ಕೆಲಸಗಳಲ್ಲಿ ಸಕ್ರಿಯರಾಗಿದ್ದರು.