ಬದಿಯಡ್ಕ: ಕುಂಬಳೆ ಸೀಮೆಯ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ನವೀಕರಣ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಯ ಪ್ರಾದೇಶಿಕ ಸಮಿತಿ ರೂಪೀಕರಣ ಸಭೆ ಬದಿಯಡ್ಕ ಸಂಸ್ಕøತಿ ಭವನದಲ್ಲಿ ನಡೆಯಿತು.
ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ಕಾಮತ್ ಅಧ್ಯಕ್ಷತೆ ವಹಿಸಿ ಬ್ರಹ್ಮಕಲಶೋತ್ಸವಕ್ಕೆ ಭಗವದ್ಭಕ್ತರ ಸಹಕಾರವನ್ನು ಕೋರಿದರು. ಆರ್ಥಿಕ ಸಮಿತಿ ಸದಸ್ಯ ಮುರಳೀ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬದಿಯಡ್ಕ ಪಂಚಾಯಿತಿ ಪ್ರಾದೇಶಿಕ ಸಮಿತಿಗೆ ಗೌರವಾಧ್ಯಕ್ಷರುಗಳಾಗಿ ವಸಂತ ಪೈ ಬದಿಯಡ್ಕ, ನಿತ್ಯಾನಂದ ಶೆಣೈ ಬದಿಯಡ್ಕ, ಎಸ್.ಎನ್.ಮಯ್ಯ ಬದಿಯಡ್ಕ ಅವರನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಭಾಸ್ಕರ ಕೆ ಬದಿಯಡ್ಕ ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ಹರಿಪ್ರಸಾದ ರೈ ಪುತ್ರಕಳ ಇವರನ್ನು ಆಯ್ಕೆಗೊಳಿಸಲಾಯಿತು.