ಕಾಸರಗೋಡು: ಕೋಟೆಕಣಿ ಸಪರಿವಾರ ಶ್ರೀ ಅನ್ನಪೂರ್ಣೇಶ್ವರಿ ಮಹಾಕಾಳಿ ದೇವಸ್ಥಾನದಲ್ಲಿ ಆಡಳಿತ ಸಮಿತಿ ಮತ್ತು ಮಹಿಳಾ ಸಂಘದ ನೇತೃತ್ವದಲ್ಲಿ ಆ.16 ರಂದು ಸಂಜೆ 5.30 ರಿಂದ 7 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಲಿದೆ. ಸಂಜೆ 5.30 ಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜೆ ಆರಂಭ, ರಾತ್ರಿ 8 ಕ್ಕೆ ಶ್ರೀ ಅನ್ನಪೂರ್ಣೇಶ್ವರಿ ಮಹಾಕಾಳಿ ದೇವಿಯ ಮಹಾಪೂಜೆ, 8.15 ಕ್ಕೆ ಶ್ರೀ ವರಮಹಾಲಕ್ಷ್ಮೀ ದೇವಿಯ ಮಹಾಪೂಜೆ ಜರಗಲಿದೆ.