ಕೊಚ್ಚಿ: ಕೇರಳ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎ.ಜೆ ದೇಸಾಯಿ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ, ಹಣ ವಸೂಲಿ ಮಾಡಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಚ್ಚಿ: ಕೇರಳ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎ.ಜೆ ದೇಸಾಯಿ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ, ಹಣ ವಸೂಲಿ ಮಾಡಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಫ್‌ಐಆರ್ ಪ್ರಕಾರ, ಈ ವರ್ಷದ ಜುಲೈನಲ್ಲಿ ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ನಿವೃತ್ತರಾದ ದೇಸಾಯಿ ಅವರ ಹೆಸರಿನಲ್ಲಿ ಅಪರಿಚಿತರು ಇನ್‌ಸ್ಟಾಗ್ರಾಮ್ ಖಾತೆಯನ್ನು ತೆರೆದಿದ್ದಾರೆ ಎಂದು ತಿಳಿದು ಬಂದಿದೆ.
ದೇಸಾಯಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ವ್ಯಕ್ತಿಯೊಬ್ಬರು ಆಗಸ್ಟ್ 17ರಂದು ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಮ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇಸಾಯಿ ಅವರ ಆಪ್ತರಿಗೆ ನಕಲಿ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಆರೋಪಿಗಳು ಹಣಕ್ಕಾಗಿ ಸಂದೇಶ (ಮೆಸೇಜ್) ಕಳುಹಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣ ಸಂಬಂಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) ಮತ್ತು ಐಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.