ಪೆರ್ಲ: ಪೆರ್ಲ ನಾಲಂದ ಕಾಲೇಜಿನ 2024-25ನೇ ಸಾಲಿನ ರಕ್ಷಕ ಶಿಕ್ಷಕ ಸಂಘ ಹಾಗೂ ಸರ್ವ ಸದಸ್ಯರ ಸಭೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯಕ್ಕೆ ಬೇಕಾದ ಉನ್ನತ ಶಿಕ್ಷಣ ಕೊಡುವಲ್ಲಿ ನಾಲಂದ ಕಾಲೇಜು ಮಹತ್ತರ ಪಾತ್ರ ವಹಿಸುತ್ತಿದೆ. ಮಕ್ಕಳ ಸಮಗ್ರ ರೀತಿಯ ಅಭಿವೃದ್ಧಿಯಲ್ಲಿ ಕಾಲೇಜು ಸೇರಿದಂತೆ ಮಕ್ಕಳ ಹೆತ್ತವರು ಕೂಡ ಮಹತ್ವದ ಪಾತ್ರ ವಹಿಸುತ್ತಾರೆ ಎಂದರು.
ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿ ಪುಟ್ಟಪ್ಪ ಕೆ.ಖಂಡಿಗೆ ಅವರನ್ನು ಆಯ್ಕೆ ಮಾಡಲಾಯಿತು. ಇತರ ಪದಾಧಿಕಾರಿಗಳ ಆಯ್ಕೆ ನಡೆಯಿತು. ರಕ್ಷಕ ಶಿಕ್ಷಕ ಸಂಘದ ನಿಕಟ ಪೂರ್ವ ಉಪಾಧ್ಯಕ್ಷ ಬಾಲಕೃಷ್ಣ ನಾಯ್ಕ್ ಬನಾರಿ ನಲ್ಕ, ಸಿಬ್ಬಂದಿ ಕಾರ್ಯದರ್ಶಿ ಶ್ರೀನಿಧಿ ಕೆ.ಹಾಗೂ ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ವಿನೀಶ ಎಸ್.ವಿ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿಗಳು ಭಾಗವಹಿಸಿದ್ದರು.