HEALTH TIPS

ರಾಷ್ಟ್ರೀಯ ಕ್ರೀಡಾ ದಿನಾಚರಣೆ | ಕ್ರೀಡೆಗೆ ಪ್ರೋತ್ಸಾಹ ನೀಡಲು ಸರ್ಕಾರ ಬದ್ಧ: ಮೋದಿ

            ವದೆಹಲಿ: ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

           ನಮ್ಮ ಸರ್ಕಾರವು ಕ್ರೀಡೆಗೆ ಮತ್ತಷ್ಟು ಬೆಂಬಲ ನೀಡಲು ಬದ್ಧವಾಗಿದೆ. ಮತ್ತಷ್ಟು ಯುವ ಪ್ರತಿಭೆಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡು ಪ್ರಜ್ವಲಿಸುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.


          'ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು. ಇಂದು ನಾವು ಮೇಜರ್ ಧ್ಯಾನ್ ಚಂದ್ ಜಿ ಅವರಿಗೆ ಗೌರವ ಸಲ್ಲಿಸುತ್ತೇವೆ. ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವ ಮತ್ತು ಭಾರತಕ್ಕಾಗಿ ಆಡಿದ ಎಲ್ಲರನ್ನು ಅಭಿನಂದಿಸಲು ಇದು ಒಂದು ಸುಸಂದರ್ಭವಾಗಿದೆ'ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

'ನಮ್ಮ ಸರ್ಕಾರವು ಕ್ರೀಡೆಯನ್ನು ಬೆಂಬಲಿಸಲು ಬದ್ಧವಾಗಿದೆ ಮತ್ತು ಹೆಚ್ಚಿನ ಸಂಖ್ಯೆಯ ಯುವಕರು ಯುವಕರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಸಮರ್ಥರಾಗಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ' ಎಂದು ಪ್ರಧಾನಿ ಹೇಳಿದ್ದಾರೆ.

             ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನವಾದ ಆಗಸ್ಟ್ 29ರಂದು ಪ್ರತಿ ವರ್ಷ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ.

                ಕೇಂದ್ರದ ಕ್ರೀಡಾ ಸಚಿವ ಮನಸುಖ್ ಮಾಂಡವೀಯ ಧ್ಯಾನ್ ಚಂದ್ ್ರತಿಮೆಗೆ ಗೌರವ ನಮನ ಸಲ್ಲಿಸಿದ್ದಾರೆ.

           1925ರಿಂದ 1949ರ ನಡುವೆ ಭಾರತದ ಪರ 185 ಪಂದ್ಯಗಳನ್ನು ಆಡಿರುವ ಧ್ಯಾನ್ ಚಂದ್ 1500 ಗೋಲ್‌ಗಳನ್ನು ಗಳಿಸಿದ್ದಾರೆ. 1928,1932 ಮತ್ತು 1936ರಲ್ಲಿ ಭಾರತ ಹಾಕಿ ತಂಡ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವಲ್ಲಿ ಧ್ಯಾನ್ ಚಂದ್ ಪ್ರಮುಖ ಪಾತ್ರ ವಹಿಸಿದ್ದರು. 1956ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವವಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries