HEALTH TIPS

ದೆಹಲಿಯ ಹಲವು ಭಾಗಗಳಲ್ಲಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

 ವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಭಾಗಗಳಲ್ಲಿ ಸೋಮವಾರ ಬೆಳಿಗ್ಗೆ ಭಾರಿ ಮಳೆಯಾಗಿದ್ದು, 'ಯೆಲ್ಲೋ ಅಲರ್ಟ್' ಘೋಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ, ದಕ್ಷಿಣ, ನೈರುತ್ಯ ಹಾಗೂ ಪೂರ್ವ ದೆಹಲಿಯಲ್ಲಿ ಮಳೆ ಸುರಿದಿದೆ.

ಕನಿಷ್ಠ ತಾಪಮಾನ 24.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ದೆಹಲಿಯ ವಾಯುಗುಣಮಟ್ಟ ಸೂಚ್ಯಂಕ ಸಮಾಧಾನಕರವಾಗಿದ್ದು, ಬೆಳಿಗ್ಗೆ 9 ಗಂಟೆಗೆ 53ರಷ್ಟಿತ್ತು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ದತ್ತಾಂಶದಿಂದ ಗೊತ್ತಾಗಿದೆ.

ವಾಯು ಗುಣಮಟ್ಟ ಮಾಪನ ಸೂಚ್ಯಂಕದ ಅನುಸಾರ, 0 ಮತ್ತು 50 ರ ನಡುವಿನ ಎಕ್ಯೂಐ ಅನ್ನು 'ಉತ್ತಮ', 51 ಮತ್ತು 100 'ತೃಪ್ತಿದಾಯಕ', 101 ಮತ್ತು 200 'ಮಧ್ಯಮ', 201 ಮತ್ತು 300 'ಕಳಪೆ', 301 ಮತ್ತು 400 'ಅತಿ ಕಳಪೆ', ಮತ್ತು 401 ಮತ್ತು 500 'ತೀವ್ರ' ಎಂದು ಪರಿಗಣಿಸಲಾಗುತ್ತದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries