HEALTH TIPS

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ | ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್

           ವದೆಹಲಿ: ಕೋಲ್ಕತ್ತದ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿರುವ ಸುಪ್ರೀಂ ಕೋರ್ಟ್, ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಹೇಳಿದೆ.

           ಕಾನೂನು ತನ್ನ ಕೆಲಸ ಮಾಡಲಿದೆ ಎಂಬುದನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು ಎಂದು ಸಿಬಿಐ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಪರ ಹಾಜರಿದ್ದ ಕಪಿಲ್ ಸಿಬಲ್‌ ಅವರಿಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ.

           'ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಅವರ ಬಗ್ಗೆ ಯಾರಾದರೂ ಏನಾದರು ಟೀಕೆ ಮಾಡಿದರೆ ಅವರ ಬೆರಳಗಳನ್ನು ಕತ್ತರಿಸಲಾಗುತ್ತದೆ ಎಂದು ಪಶ್ಚಿಮ ಬಂಗಾಳದ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ' ಎಂದು ತುಷಾರ್ ಮೆಹ್ತಾ ನ್ಯಾಯಾಲಯದ ಗಮನ ಸೆಳೆದರು.

             ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಗುಂಡು ಹಾರಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ ಎಂಬುವುದನ್ನು ಪ್ರಸ್ತಾಪಿಸುವ ಮೂಲಕ ಕಪಿಲ್ ಸಿಬಲ್ ಕೌಂಟರ್ ನೀಡಿದರು.

              ಇದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೂ ಒಳಗೊಂಡ ಪೀಠವು, 'ಈ ಪರಿಸ್ಥಿತಿಯನ್ನು ರಾಜಕೀಯಕರಣಗೊಳಿಸಬೇಡಿ. ಕಾನೂನು ತನ್ನ ಕೆಲಸ ಮಾಡಲಿದೆ ಎಂಬುದನ್ನು ರಾಜಕೀಯ ಪಕ್ಷಗಳು ಮನಗಾಣಬೇಕಿದೆ. ಕ್ಷಿಪ್ರ ತನಿಖೆ ಬಳಿಕ ಕಾನೂನಿನ ಅನ್ವಯ ಕ್ರಮ ಆಗಲಿದೆ ಎಂಬುದನ್ನು ನಾವು ಖಚಿತಪಡಿಸುತ್ತೇವೆ'ಎಂದು ಪೀಠ ಹೇಳಿದೆ.

ಇದು ವೈದ್ಯರ ಕ್ಷೇಮ ಮತ್ತು ಸುರಕ್ಷತೆಯ ಕುರಿತಾದ ಕಾಳಜಿಗೆ ಸಂಬಂಧಿಸಿದ ವಿಷಯವಾಗಿದೆ. ಈ ಕುರಿತಂತೆ ಜಾರಿಗೊಳಿಸಬಹುದಾದಂತಹ ನಿರ್ದೇಶನಗಳನ್ನು ನ್ಯಾಯಾಲಯ ನೀಡುತ್ತದೆ ಎಂದೂ ಪೀಠ ಹೇಳಿದೆ.

             ಆರ್‌.ಜಿ. ಕರ್ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಟೀಕಿಸುವ ಮತ್ತು ಅವರ ರಾಜೀನಾಮೆಗೆ ಒತ್ತಾಯಿಸುವವರ ಬೆರಳು ಕತ್ತರಿಸುತ್ತೇವೆ ಎಂದು ಸಚಿವ ಉದಯನ್ ಗುಹಾ ಹೇಳಿಕೆ ನೀಡಿದ್ದರು.

               ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸೋಮವಾರವೇ ರಾಜೀನಾಮೆ ನೀಡಿ ಎಂದು ಸಿಎಂ ಮಮತಾರನ್ನು ಒತ್ತಾಯಿಸಿದ್ದರು. ಇಲ್ಲವಾದರೆ, ಮಂಗಳವಾರ ಪ್ರಕರಣಕ್ಕೆ ನಿಮ್ಮನ್ನು ಹೊಣೆ ಮಾಡಲಾಗುತ್ತದೆ ಅಥವಾ ಗುಂಡು ಹಾರಿಸಲಾಗುತ್ತದೆ ಎಂದು ಹೇಳಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries