ಫರಿದಾಬಾದ್: ನಾಲ್ಕನೇ ಕೈಗಾರಿಕಾ ಕ್ರಾಂತಿಯನ್ನು ಎದುರಿಸಲು ಹಾಗೂ ಅದರಿಂದ ಸೃಷ್ಟಿಯಾಗುವ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಆರ್ಥಿಕ ಅಭಿವೃದ್ಧಿ ಪಥದತ್ತ ಸಾಗಲು ಭಾರತ ಸಿದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಹೇಳಿದ್ದಾರೆ.
ಫರಿದಾಬಾದ್: ನಾಲ್ಕನೇ ಕೈಗಾರಿಕಾ ಕ್ರಾಂತಿಯನ್ನು ಎದುರಿಸಲು ಹಾಗೂ ಅದರಿಂದ ಸೃಷ್ಟಿಯಾಗುವ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಆರ್ಥಿಕ ಅಭಿವೃದ್ಧಿ ಪಥದತ್ತ ಸಾಗಲು ಭಾರತ ಸಿದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಹೇಳಿದ್ದಾರೆ.
ಫರಿದಾಬಾದ್‌ನ ಜೆ.ಸಿ.ಬೋಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವದಲ್ಲಿ ಮಾತನಾಡಿದ ಮುರ್ಮು, ಆಧುನಿಕ ಪ್ರಪಂಚದಲ್ಲಿ ತಂತ್ರಜ್ಞಾನವನ್ನು ಸುಸ್ಥಿರ ಅಭಿವೃದ್ಧಿ ಮತ್ತು ಜನರ ಹಿತಾಸಕ್ತಿಗಾಗಿ ಬಳಸಿಕೊಳ್ಳಬೇಕೇ ವಿನಃ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ
ತಂತ್ರಜ್ಞಾನ ಅಭಿವೃದ್ಧಿಯಿಂದಾಗಿ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳು ದೊರೆಯುತ್ತಿವೆ. ಅಂತರ್ಜಾಲ ಸಂಪರ್ಕದಿಂದಾಗಿ ವಿದೇಶಗಳಿಂದಲೂ ಉದ್ಯೋಗಾವಕಾಶಗಳು ಲಭ್ಯವಾಗುತ್ತಿವೆ. ತಂತ್ರಜ್ಞಾನವು ಸ್ವಾವಲಂಬನೆಯ ಮತ್ತು ಕೌಶಲ್ಯಯುತವಾದ ಬದುಕು ಕಟ್ಟಿಕೊಳ್ಳಲು ಸಹಾಯವಾಗಿದೆ ಎಂದು ಹೇಳಿದ್ದಾರೆ.
ತಂತ್ರಜ್ಞಾನದಿಂದ ಎಷ್ಟೆಲ್ಲಾ ಲಾಭಗಳು ಇವೆಯೋ, ಅವುಗಳ ದುರ್ಬಳಕೆ ವಿನಾಶಕಾರಿ ಪರಿಣಾಮಗಳಿಗೆ ಕಾರಣವಾಗುತ್ತದೆ ಎಂದು ಮುರ್ಮು ಕಳವಳ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳು ಮಹಾನ್ ವಿಜ್ಞಾನಿಗಳ ಜೀವನದಿಂದ ಸ್ಫೂರ್ತಿ ಪಡೆದು ತಂತ್ರಜ್ಞಾನದ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಒತ್ತಾಯಿಸಿದ್ದಾರೆ.