ಉಪ್ಪಳ: ಸಾವಿರಾರು ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ನಾವು ಒಂದಾಗಿ ಶ್ರಮಿಸಿ ದೇಶದ ಅಭಿವೃದ್ಧಿಗಾಗಿ ದುಡಿಯಬೇಕು ಎಂದು ಮಂಗಲ್ಪಾಡಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಯೂಸುಫ್ ಹೇರೂರು ನುಡಿದರು.
ಹೇರೂರಿನ ಸರ್ಕಾರಿ ಬುನಾದಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉಮರ್ ಬೈಂಕಿಮೂಲೆ ಅಧ್ಯಕ್ಷತೆ ವಹಿಸಿ ಸ್ವಾತಂತ್ರ್ಯ ಹೋರಾಟದ ವಿವರಣೆ ನೀಡಿದರು. ಬ್ಯಾಂಕ್ ನಿವೃತ್ತ ಉದ್ಯೋಗಿ ವಿಶ್ವನಾಥ್ ಶೆಟ್ಟಿ, ವಿನಾಯಕ ಮಿತ್ರವೃಂದದ ಉದಯ್ ಗಾಂಭೀರ್ ಶುಭಾಶಂಶನೆಗೈದರು. ಶಾಲಾ ಮುಖ್ಯ ಶಿಕ್ಷಕ ಶ್ರೀಧರ ಭಟ್ ಧ್ವಜಾರೋಹಣ ನೆರವೇರಿಸಿ ಶಾಲೆಯ ಯೋಜನೆಗಳನ್ನು ವಿವರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಜಿನಿ ಸ್ವಾಗತಿಸಿ, ಶಾಲಿನಿ ವಂದಿಸಿದರು. ಶಿಕ್ಷಕ ಸಾಜನ್ ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ಅಸೀಸ್ ಸಹಕರಿಸಿದರು.