ಕೊಚ್ಚಿ: ಕೋಲ್ಕತ್ತದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಕೇರಳದ ಕೊಚ್ಚಿಯ ಖಾಸಗಿ ಆಸ್ಪತ್ರೆಯೊಂದು ರಾಜ್ಯದಾದ್ಯಂತ ತನ್ನ ಮಹಿಳಾ ಸಿಬ್ಬಂದಿಗೆ ಮಾರ್ಷಲ್ ಆರ್ಟ್ಸ್ ತರಬೇತಿ ನೀಡಲು ಮುಂದಾಗಿದೆ.
ಕೊಚ್ಚಿ: ಕೋಲ್ಕತ್ತದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಕೇರಳದ ಕೊಚ್ಚಿಯ ಖಾಸಗಿ ಆಸ್ಪತ್ರೆಯೊಂದು ರಾಜ್ಯದಾದ್ಯಂತ ತನ್ನ ಮಹಿಳಾ ಸಿಬ್ಬಂದಿಗೆ ಮಾರ್ಷಲ್ ಆರ್ಟ್ಸ್ ತರಬೇತಿ ನೀಡಲು ಮುಂದಾಗಿದೆ.
ಮಹಿಳಾ ಸಿಬ್ಬಂದಿಗೆ ಮಾರ್ಷಲ್ ಆರ್ಟ್ಸ್ ತರಬೇತಿ ನೀಡುವ ಸಲುವಾಗಿ ಆರಂಭಿಕ ಹಂತದಲ್ಲಿ ₹50 ಲಕ್ಷ ಮೀಸಲಿಡಲಾಗಿದೆ ಎಂದು ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆ ತಿಳಿಸಿದೆ.
ಪ್ರಾಥಮಿಕ ಹಂತದಲ್ಲಿ ಆರು ತಿಂಗಳೊಳಗೆ 50 ಸಾವಿರ ಮಹಿಳೆಯರಿಗೆ ಉಚಿತವಾಗಿ ತರಬೇತಿ ನೀಡಲು ಯೋಜಿಸಲಾಗಿದೆ. ಇದರ ಜೊತೆಗೆ ಮಹಿಳೆಯರ ಆತ್ಮರಕ್ಷಣೆಗಾಗಿ ಪೆಪ್ಪರ್ ಸ್ಪ್ರೇಯಂತಹ ಸುರಕ್ಷತಾ ಕಿಟ್ ನೀಡಲಾಗುವುದು ಎಂದು ಅದು ಹೇಳಿದೆ.
ಸ್ಥಳೀಯ ಸಂಸ್ಥೆಗಳ ಸಹಯೋಗ ಮತ್ತು ರಾಜ್ಯ ಸರ್ಕಾರದ ಬೆಂಬಲದೊಂದಿಗೆ ಮಾರ್ಷಲ್ ಆರ್ಟ್ಸ್ ತರಬೇತಿಯನ್ನು ನೀಡಲಾಗುವುದು. ಆಸ್ಪತ್ರೆಯಲ್ಲಿ ಸುರಕ್ಷಿತ ವಾತಾವರಣ ಸೃಷ್ಟಿಸುವ ನಮ್ಮ ಬದ್ಧತೆಯ ಭಾಗವಾಗಿ ಎಲ್ಲ ಮಹಿಳಾ ಸಿಬ್ಬಂದಿಗೆ ತರಬೇತಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದೆ.
ಮಾರ್ಷಯಲ್ ಆರ್ಟ್ಸ್ ತರಬೇತಿ ಮೂಲಕ ಮಹಿಳೆಯರ ದೈಹಿಕ ರಕ್ಷಣಾ ಸಾಮರ್ಥ್ಯದೊಂದಿಗೆ ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಹೇಳಿದೆ.
ಇವೆಲ್ಲದರ ಜೊತೆಗೆ ಮಹಿಳಾ ಸಿಬ್ಬಂದಿಯ ನೆರವಿಗಾಗಿ ಆಸ್ಪತ್ರೆಯು ತನ್ನದೇ ಆದ ಮೊಬೈಲ್ ಅಪ್ಲಿಕೇಷನ್ ಅನ್ನು ಅಭಿವೃದ್ಧಿಪಡಿಸಿದೆ.