HEALTH TIPS

ಕೋಲ್ಕತ್ತ-ಢಾಕಾ ಮೈತ್ರಿ ಎಕ್ಸ್‌ಪ್ರೆಸ್‌ ರೈಲು ರದ್ದು

 ವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೋಲ್ಕತ್ತ-ಢಾಕಾ ನಡುವೆ ಸಂಚರಿಸುವ ಮೈತ್ರಿ ಎಕ್ಸ್‌ಪ್ರೆಸ್‌ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.


ಬಾಂಗ್ಲಾದಲ್ಲಿ ಉದ್ವಿಗ್ನ ವಾತಾವರಣ ಇರುವುದರಿಂದ ಎರಡು ವಾರಕ್ಕೊಮ್ಮೆ ಸಂಚರಿಸುವ ಕೋಲ್ಕತ್ತ-ಖುಲ್ನಾ-ಕೋಲ್ಕತ್ತ ಬಂಧನ್ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿದ್ದು, ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ತಿಳಿಸಿದ್ದಾರೆ.

ಸರ್ಕಾರದ ವಿರುದ್ಧ ಭಾನುವಾರದಿಂದ ಆರಂಭವಾಗಿರುವ ಬೃಹತ್‌ ಪ್ರತಿಭಟನೆಯಿಂದಾಗಿ ಇದುವರೆಗೆ 106 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಸೀನಾ ಅವರು ಇಂದು (ಸೋಮವಾರ) ರಾಜೀನಾಮೆ ಸಲ್ಲಿಸಿ, ದೇಶ ತೊರೆದಿದ್ದಾರೆ ಎಂದು ವರದಿಯಾಗಿದೆ.

ಭಾರತ -ಬಾಂಗ್ಲಾ ಗಡಿಯಲ್ಲಿ 'ಹೈ ಅಲರ್ಟ್'

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ 4,096 ಕಿ.ಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ಹೈ ಅಲರ್ಟ್ ಘೋಷಿಸಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries