ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾರಾಯಣಪುರ ಹಾಗೂ ಕಂಕೇರ್ ಜಿಲ್ಲೆಯ ಅಬ್ದುಜಮಾಡ್ ಪ್ರದೇಶದಲ್ಲಿ ಬೆಳಿಗ್ಗೆ 8 ಗಂಟೆಗೆ ಭದ್ರತಾ ಪಡೆಗಳ ಜಂಟಿ ತಂಡ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು.
ಸಮವಸ್ತ್ರ ಧರಿಸಿದ್ದ ಮೂವರು ಮಹಿಳಾ ನಕ್ಸಲರ ಮೃತದೇಹಗಳು ಪತ್ತೆಯಾಗಿವೆ. ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
'ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಈ ವರ್ಷ ರಾಜ್ಯದ ವಿವಿಧೆಡೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 145 ಮಂದಿ ನಕ್ಸಲರು ಮೃತಪಟ್ಟಿದ್ದಾರೆ' ಎಂದು ಅಧಿಕಾರಿಯೊಬ್ಬರು ತಿಳಿಸಿದರು.