ಕಾಬೂಲ್: ಅಫ್ಗಾನಿಸ್ತಾನದ ಆಡಳಿತವನ್ನು ತಾಲಿಬಾನ್ ಸಂಘಟನೆಯು ಸಂಪೂರ್ಣವಾಗಿ ತನ್ನ ಹಿಡಿತಕ್ಕೆ ತೆಗೆದುಕೊಂಡು ಮೂರು ವರ್ಷಗಳಾದರೂ, ಅಲ್ಲಿನ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ.
ಕಾಬೂಲ್: ಅಫ್ಗಾನಿಸ್ತಾನದ ಆಡಳಿತವನ್ನು ತಾಲಿಬಾನ್ ಸಂಘಟನೆಯು ಸಂಪೂರ್ಣವಾಗಿ ತನ್ನ ಹಿಡಿತಕ್ಕೆ ತೆಗೆದುಕೊಂಡು ಮೂರು ವರ್ಷಗಳಾದರೂ, ಅಲ್ಲಿನ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ.
ಅಫ್ಗಾನಿಸ್ತಾನದ 4 ಕೋಟಿ ಜನಸಂಖ್ಯೆಯ ಪೈಕಿ ಮೂರನೇ ಒಂದರಷ್ಟು ಜನರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ.
ಈ ಎಲ್ಲ ಸಮಸ್ಯೆಗಳ ನಡುವೆಯೂ ಕೆಲವೊಂದು ಆಶಾದಾಯಕ ಬೆಳವಣಿಗೆ ಕಂಡುಬಂದಿದೆ ಎಂದು ಅಫ್ಗಾನಿಸ್ತಾನ ಸರ್ಕಾರ ಹೇಳಿದೆ. ದೇಶದ ಕರೆನ್ಸಿಯು ಸಮತೋಲನ ಕಾಯ್ದುಕೊಂಡಿದೆ. ಭ್ರಷ್ಟಾಚಾರ ಪ್ರಮಾಣ ಇಳಿಕೆಯಾಗಿದೆ ಹಾಗೂ ತೆರಿಗೆ ಸಂಗ್ರಹದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ ಎಂದು ತಿಳಿಸಿದೆ.