HEALTH TIPS

ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಸ್ವಾತಂತ್ರ್ಯೋತ್ಸವ

          ಕುಂಬಳೆ: ಮುಜುಂಗಾವು  ಶ್ರೀಭಾರತಿ ವಿದ್ಯಾಪೀಠದಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ  ಎಸ್. ಎನ್ ರಾವ್ ಮುನ್ನಿಪ್ಪಾಡಿ  ಧ್ವಜಾರೋಹಣಗೈದು ನಡೆದ ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಭಟ್ ಚೆಕ್ಕಣಿಕೆ ಮಾತನಾಡಿ ಶುಭ ಹಾರೈಸಿದರು. ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ, ಮುಖ್ಯ ಶಿಕ್ಷಕ ಶ್ಯಾಮ್ ಭಟ್ ದರ್ಭೆಮಾರ್ಗ, ಸಹ ಮುಖ್ಯ ಶಿಕ್ಷಕಿ ಚಿತ್ರಸರಸ್ವತಿ ಉಪಸ್ಥಿತರಿದ್ದರು. 


             ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಬಳಿಕ ಯೋಗಾಚಾರ್ಯ ಪುಂಡರಿಕಾಕ್ಷ ಆಚಾರ್ಯ ಬೆಳ್ಳೂರು ಇವರ ನೇತೃತ್ವದಲ್ಲಿ ರಾಮಾಯಣ ಮಾಸಾಚರಣೆಯ ಐದನೇ ದಿನದ ಕಾರ್ಯಕ್ರಮಗಳು ಜರಗಿದವು. ಶಿಕ್ಷಕಿಯರಾದ ವಿದ್ಯಾಲಕ್ಷ್ಮಿ ಸ್ವಾಗತಿಸಿ, ವಿದ್ಯಾ ಹೆಗಡೆ ವಂದಿಸಿದರು. ಕುಮಾರಿ ಶರಣ್ಯ ನಿರೂಪಿಸಿದರು. ಈ ಸಂದರ್ಭದಲ್ಲಿ ವೇದಮೂರ್ತಿ ಕೋಣಮ್ಮೆ ಮಹಾದೇವ ಭಟ್ ಹಾಗೂ ಕೃಷ್ಣ ಆಟ್ರ್ಸ್ ಅಂಡ್ ಸ್ಪೋಟ್ರ್ಸ್ ಕ್ಲಬ್ ಮುಜುಂಗಾವು ಇವರ ಪ್ರಾಯೋಜಕತ್ವದಲ್ಲಿ ಸಿಹಿತಿಂಡಿ ವಿತರಿಸಲಾಯಿತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries