ಕೋಲ್ಕತ್ತ: ಆರ್.ಜಿ ಕರ್ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ಪೊಲೀಸ್ ಠಾಣೆಗೆ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮುತ್ತಿಗೆ ಹಾಕಿದ್ದಾರೆ.

ಶುಕ್ರವಾರ ಬೆಳಿಗ್ಗೆ ಸುಮಾರು 100ಕ್ಕೂ ಹೆಚ್ಚು ಬಿಜೆಪಿ ಬೆಂಬಲಿಗರು ಬ್ಯಾರಿಕೇಡ್‌ಗಳನ್ನು ಮುರಿದು ಪೊಲೀಸ್ ಠಾಣೆಗೆ ನುಗ್ಗಿದ್ದಾರೆ.
ಪ್ರತಿಭಟನಾಕಾರರಲ್ಲಿ ಹಲವು ಮಹಿಳೆಯರು ಘೋಷಣೆಗಳನ್ನು ಕೂಗಿದ್ದು, ಪೊಲೀಸ್ ಠಾಣೆಯೊಳಗೆ ಸ್ವಲ್ಪ ಸಮಯ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಸ್ಥಳದಿಂದ ನಿರ್ಗಮಿಸುವ ಮೊದಲು ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ರಸ್ತೆ ತಡೆ ನಡೆಸಿದ್ದಾರೆ.
ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸದಿರಲು ಕ್ಷಿಪ್ರ ಕಾರ್ಯಾಚರಣೆ ಪಡೆ(ಆರ್‌ಎಎಫ್) ಮತ್ತು ಪೊಲೀಸರು ಹೆಚ್ಚಿನ ಕ್ರಮಕ್ಕೆ ಮುಂದಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಆಗಸ್ಟ್ 21ರಿಂದ ಐದು ದಿನಗಳ ಕಾಲ ನಗರದ ಧರಣಿ ನಡೆಸಲು ಪಶ್ಚಿಮ ಬಂಗಾಳ ಬಿಜೆಪಿ ಘಟಕಕ್ಕೆ ಕಲ್ಕತ್ತ ಹೈಕೋರ್ಟ್ ಅನುಮತಿ ನೀಡಿತ್ತು.