ಕೊಚ್ಚಿ: ಮೀಸಲಾತಿಯನ್ನು ಜಾತಿಯ ಆಧಾರದ ಮೇಲೆ ನಿರ್ಧರಿಸಬೇಕೇ ಹೊರತು ಧರ್ಮದಿಂದಲ್ಲ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.
ಇದನ್ನು ಎತ್ತಿ ಹಿಡಿದ ವಿಎಚ್ ಪಿ ರಾಜ್ಯಾಧ್ಯಕ್ಷ ವಿ.ಜಿ.ತಂಬಿ ನೇತೃತ್ವದಲ್ಲಿ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ಆಯೋಗಕ್ಕೆ ಮನವಿ ಸಲ್ಲಿಸಿದರು.
ಮತಾಂತರಗೊ0ಡ ಭಾರತೀಯ ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ಮತ್ತು ಮೀಸಲಾತಿಯ ಬೇಡಿಕೆಯನ್ನು ಯಾವುದೇ ಸಂದರ್ಭದಲ್ಲೂ ಒಪ್ಪಿಕೊಳ್ಳಲಾಗುವುದಿಲ್ಲ. ಇದು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಉಲ್ಲಂಘಿಸುತ್ತದೆ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಅರ್ಜಿಯಲ್ಲಿ ಗಮನಸೆ
ಶತಮಾನಗಳ ದಬ್ಬಾಳಿಕೆ ಮತ್ತು ತಾರತಮ್ಯವನ್ನು ಎದುರಿಸಿದ ಐತಿಹಾಸಿಕವಾಗಿ ಹಿಂದುಳಿದ ಜಾತಿಗಳಿಗೆ ಭಾರತೀಯ ಸಂವಿಧಾನವು ಎಸ್.ಸಿ. ಸ್ಥಾನಮಾನ ಮತ್ತು ಮೀಸಲಾತಿಗಳನ್ನು ನೀಡುತ್ತದೆ. ಮತಾಂತರಗೊAಡ ಕ್ರೈಸ್ತರು ಮತ್ತು ಮುಸ್ಲಿಮರು ಈ ಮಾನದಂಡಕ್ಕೆ ಅರ್ಹರಲ್ಲ. ಕ್ರಿಶ್ಚಿಯನ್ ಧರ್ಮ ಅಥವಾ ಇಸ್ಲಾಂಗೆ ಮತಾಂತರಗೊಳ್ಳುವ ವ್ಯಕ್ತಿಗಳು ಎಸ್.ಸಿ. ಪ್ರಯೋಜನಗಳಿಗೆ ಅರ್ಹರಲ್ಲ. ಮತಾಂತರಗೊAಡ ಕ್ರೈಸ್ತರು ಮತ್ತು ಮುಸ್ಲಿಮರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡುವುದು ಮೀಸಲಾತಿ ನೀತಿಯ ದುರುಪಯೋಗಕ್ಕೆ ಕಾರಣವಾಗುವುದಲ್ಲದೆ, ಅದರ ಮೂಲ ಉದ್ದೇಶ ಮತ್ತು ಲಕ್ಷö್ಯ ನಾಶಪಡಿಸುತ್ತದೆ ಎಂದು ವಿಎಚ್‌ಪಿ ಗಮನಸೆಳೆದಿದೆ ಮತ್ತು ಮತಾಂತರವು ಶತಮಾನಗಳ ಸಾಮಾಜಿಕ ಮತ್ತು ಆರ್ಥಿಕತೆಯನ್ನು ಅಳಿಸಿಹಾಕುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಪರಿವರ್ತಿತ ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಸಾಂಪ್ರದಾಯಿಕ ಎಸ್.ಸಿ. ಸಮುದಾಯಗಳಿಗಿಂತ ವಿಭಿನ್ನ ಸಾಮಾಜಿಕ ಮತ್ತು ಆರ್ಥಿಕ ಚಲನಶೀಲತೆಯನ್ನು ಹೊಂದಿದ್ದಾರೆ. ಅವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡುವುದು ಭಿನ್ನಾಭಿಪ್ರಾಯಗಳನ್ನು ಬೆಳೆಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಅರ್ಜಿಯಲ್ಲಿ ಹೇಳಿದೆ.
ಭಾರತ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಎತ್ತಿ ಹಿಡಿಯಲು ಆಯೋಗ ಸಿದ್ಧವಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.