ನವದೆಹಲಿ: ಒಲಿಂಪಿಕ್ಸ್ ಸ್ಪರ್ಧೆಯಿಂದ ಕುಸ್ತಿಪಟು ವಿನೇಶಾ ಫೋಗಟ್ ಅವರನ್ನು ಅನರ್ಹಗೊಳಿಸಿರುವುದು 'ಇಡೀ ದೇಶಕ್ಕೆ ಮಾಡಿದ ಅವಮಾನ' ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
ನವದೆಹಲಿ: ಒಲಿಂಪಿಕ್ಸ್ ಸ್ಪರ್ಧೆಯಿಂದ ಕುಸ್ತಿಪಟು ವಿನೇಶಾ ಫೋಗಟ್ ಅವರನ್ನು ಅನರ್ಹಗೊಳಿಸಿರುವುದು 'ಇಡೀ ದೇಶಕ್ಕೆ ಮಾಡಿದ ಅವಮಾನ' ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದಲ್ಲಿ ಫೈನಲ್ ತಲುಪಿದ್ದ ವಿನೇಶಾ, ಅಧಿಕ ತೂಕ ಹೊಂದಿದ್ದಾರೆ ಎಂದು 'ಬಂಗಾರದ ಪದಕ' ಸುತ್ತಿನಿಂದ ಹೊರಹಾಕಲಾಗಿದೆ.
'ಇದು ವಿನೇಶಾ ಫೋಗಟ್‌ಗಷ್ಟೇ ಅಲ್ಲ. ಇಡೀ ದೇಶಕ್ಕೆ ಆಗಿರುವ ಅವಮಾನ. ಇತಿಹಾಸ ನಿರ್ಮಿಸಲು ಹೊರಟಿದ್ದ ಫೋಗಟ್ ಅವರು, 100 ಗ್ರಾಂ ಅಧಿಕ ತೂಕ ಹೊಂದಿದ್ದಾರೆ ಎಂದು ಘೋಷಿಸಿರುವುದು ಮತ್ತು ಅನರ್ಹಗೊಳಿಸಿರುವುದು ಘೋರ ಅನ್ಯಾಯ. ಇಡೀ ದೇಶ ವಿನೇಶಾ ಅವರೊಂದಿಗೆ ಇದೆ. ಭಾರತ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದಾದರೆ ಒಲಿಂಪಿಕ್ಸ್ ಅನ್ನೇ ಬಹಿಷ್ಕರಿಸಬೇಕು' ಎಂದು ಆಗ್ರಹಿಸಿದ್ದಾರೆ.