ನವದೆಹಲಿ: ದೇಶದಾದ್ಯಂತ ಕಳ್ಳಸಾಗಣೆ ದಂಧೆನಡೆಸುತ್ತಿದ್ದ ಹಾಗೂ ಮ್ಯಾನ್ಮಾರ್ ಮೂಲದ ದಂಗೆಕೋರ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ್ದ ಶಸ್ತ್ರಾಸ್ತ್ರ ವ್ಯಾಪಾರಿ ಲಲಂಗೈಹಾವ್ಮಾ ಎಂಬಾತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ತನಿಖಾ ಸಂಸ್ಥೆಯು ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಐಪಿಸಿ, ಶಸ್ತ್ರಾಸ್ತ್ರ ಕಾಯ್ದೆ, ಸ್ಫೋಟಕ ವಸ್ತು ಕಾಯ್ದೆ ಮತ್ತು ಕಠಿಣ ಭಯೋತ್ಪಾದನಾ ವಿರೋಧಿ ಕಾಯ್ದೆಯ ವಿವಿಧ ಸೆಕ್ಷನ್‌ಗಳನ್ನು ಉಲ್ಲೇಖಿಸಿದೆ.
ಈಶಾನ್ಯ ಭಾಗವೂ ಸೇರಿದಂತೆ ದೇಶದ ಇತರೆಡೆ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲದಲ್ಲಿ ಈತ ಸಕ್ರಿಯವಾಗಿದ್ದಾನೆ ಎಂದು ಎನ್‌ಐಎ ಆರೋಪಿಸಿದೆ.
ಮಿಜೋರಾಂ ಮೂಲದ ಕೆಲವು ಘಟಕಗಳು ದೇಶದ ಈಶಾನ್ಯ ಪ್ರದೇಶದಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ, ಮದ್ದುಗುಂಡು, ಸ್ಫೋಟಕಗಳು ಸೇರಿದಂತೆ ಇನ್ನಿತರೆ ವಸ್ತುಗಳ ಕಳ್ಳಸಾಗಣೆಯಲ್ಲಿ ತೊಡಗಿವೆ ಎಂಬ ಮಾಹಿತಿಯ ಆಧಾರದಲ್ಲಿ ಎನ್‌ಐಎ 2023ರ ಡಿ. 26ರಂದು ಲಲಂಗೈಹಾವ್ಮಾ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು ಎಂದು ಎನ್‌ಐಎ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಲಲಂಗೈಹಾವ್ಮಾ ಮ್ಯಾನ್ಮಾರ್‌ನ ದಂಗೆಕೋರ ಗುಂಪುಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಅವರೊಟ್ಟಿಗೆ ಶಸ್ತ್ರಾಸ್ತ್ರಗಳ ಖರೀದಿ ವಹಿವಾಟು ನಡೆಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದಿದ್ದಾರೆ.