ಕಾಸರಗೋಡು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯ ಹಾಗೂ ಕಾಸರಗೋಡಿನ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಮತ್ತು ಕನ್ನಡ ಗ್ರಾಮದ ಸಹಯೋಗದಲ್ಲಿ, 'ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ- 2024' ಕಾರ್ಯಕ್ರಮ ನವೆಂಬರ್ 10ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ಜರುಗಲಿದೆ
ಕಾಸರಗೋಡು ಜಿಲ್ಲೆ ಸೇರಿದಂತೆ ಕೇರಳ ರಾಜ್ಯದ ಎಲ್ಲಾ ಕನ್ನಡ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಪ್ರತಿನಿಧಿಗಳನ್ನು ಆಮಂತ್ರಿಸಿ 'ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ'ವನ್ನು ಆಯೋಜಿಸಲಾಗುವುದು. ಸಮ್ಮೇಳನ ಅಧ್ಯಕ್ಷತೆ ಹಾಗೂ ವಿವಿಧ ಗೋಷ್ಠಿಯ ಅಧ್ಯಕ್ಷತೆಯನ್ನು ಕನ್ನಡ ವಿದ್ಯಾರ್ಥಿಗಳೇ ವಹಿಸಲಿದ್ದಾರೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳನ್ನು ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಆಮಂತ್ರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳ ಪೆÇೀಷಕರು ಅಥವಾ ಶಾಲಾ-ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರು ಅಧ್ಯಾಪಕರ ಶಿಫಾರಸ್ಸಿನೊಂದಿಗೆ ವಿದ್ಯಾರ್ಥಿಗಳ ಹೆಸರು, ಮನೆ ವಿಳಾಸ, ಶಾಲಾ-ಕಾಲೇಜಿನ ವಿಳಾಸ, ಜನ್ಮ ದಿನಾಂಕ, ವಯಸ್ಸು, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ, ಪಾಸ್‍ಪೋರ್ಟ್ ಅಳತೆಯ ಒಂದು ಭಾವಚಿತ್ರ ಮತ್ತು ತಮ್ಮ ಆಸಕ್ತಿ ಕ್ಷೇತ್ರದ ಕಿರು ಸಾಧನಾ ಪರಿಚಯ ಪತ್ರದೊಂದಿಗೆ ಮಾಹಿತಿಗಳನ್ನು ಬರಹ ಮೂಲಕ ಬರೆದು ಕಳುಹಿಸಲು ಕೋರಲಾಗಿದೆ.
ಶಾಲಾ ಮಕ್ಕಳ ಕವಿ ಗೋಷ್ಠಿ, ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿ, ಬಹುಭಾಷಾ ವಿದ್ಯಾರ್ಥಿಗಳ ಕವಿಗೋಷ್ಠಿ, ಶಾಲಾ ಕಾಲೇಜು ವಿದ್ಯಾರ್ಥಿಗಳ ಸಮೂಹ ಗೀತಾ ಗಾಯನ, ಕನ್ನಡ ಜಾನಪದ, ಚಲನಚಿತ್ರ ಸಮೂಹ ಗೀತ ಗಾಯನ, ಮಕ್ಕಳ ಸಾಹಿತ್ಯ ಗೋಷ್ಠಿ ವಿಭಾಗದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಬರೆದು ತಿಳಿಸಬೇಕು. ಸಮ್ಮೇಳನದಲ್ಲಿ ಕೇರಳ ಅಲ್ಲದೆ ಹೊರ ರಾಜ್ಯದ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಮಾಹಿತಿಗಾಗಿ ಶಿವರಾಮ ಕಾಸರಗೋಡು, ಅಧ್ಯಕ್ಷರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಕೇರಳ ರಾಜ್ಯ ಘಟಕ, ಕನ್ನಡ ಗ್ರಾಮ, ಪಾರಕಟ್ಟ ರಸ್ತೆ, ಕಾಸರಗೋಡು-671121
ಮೊಬೈಲ್ ಸಂಖ್ಯೆ(9448572016), ಪತ್ರ ವ್ಯವಹಾರಗಳನ್ನು ಅಂಚೆಯ ಸ್ಪೀಡ್ ಪೆÇೀಸ್ಟ್ ಮೂಲಕ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.