HEALTH TIPS

ರಸ್ತೆ ಅಪಘಾತ ಸಂತ್ರಸ್ತರಿಗೆ ನಗದುರಹಿತ ಚಿಕಿತ್ಸೆ: ನಿತಿನ್ ಗಡ್ಕರಿ

             ವದೆಹಲಿ: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದುರಹಿತ ಚಿಕಿತ್ಸೆ ನೀಡಲು ಸರ್ಕಾರವು ಯೋಜನೆ ರೂಪಿಸಿದ್ದು, ಈಗಾಗಲೇ ಚಂಡೀಗಢ ಮತ್ತು ಅಸ್ಸಾಂನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

                 ಆಯುಷ್ಮಾನ್‌ ಭಾರತ್‌ ಪ್ರಧಾನ ಮಂತ್ರಿ-ಜನಾರೋಗ್ಯ ಯೋಜನೆಯಡಿ ಸೇರ್ಪಡೆಯಾಗಿರುವ ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲಿಸಲಾಗುತ್ತದೆ. ಅವಘಡ ಸಂಭವಿಸಿದ ದಿನದಿಂದ ಏಳು ದಿನಗಳವರೆಗೆ ಗರಿಷ್ಠ ₹1.5 ಲಕ್ಷದವರೆಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

                   ಭಾರತೀಯ ಆರೋಗ್ಯ ಪ್ರಾಧಿಕಾರದ ಸಹಭಾಗಿತ್ವದಡಿ ವಾಹನ ಅಪಘಾತದಿಂದ ಗಾಯಗೊಂಡವರಿಗೆ ಈ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

             ಮೋಟರ್‌ ವಾಹನಗಳ ಕಾಯ್ದೆ 1988ರ ಅಡಿ ರಚಿಸಿರುವ ಮೋಟರ್‌ ವಾಹನ ಅಪಘಾತ ನಿಧಿಯಡಿ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries