ನವದೆಹಲಿ: ಕೋಲ್ಕತ್ತದಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗವು (ಎನ್‌ಎಚ್‌ಆರ್‌ಸಿ) ಪಶ್ಚಿಮ ಬಂಗಾಳ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಎರಡು ವಾರಗಳ ಒಳಗೆ ಪ್ರಕರಣದ ಕುರಿತು ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ಆಯೋಗ ಸೂಚಿಸಿದೆ.
'ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಭಾಂಗಣದಲ್ಲಿ ತರಬೇತಿನಿರತ ವೈದ್ಯ ವಿದ್ಯಾರ್ಥಿನಿಯ ಶವ ಪತ್ತೆಯಾಗಿರುವ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಆಯೋಗ ತಿಳಿಸಿದೆ.
'ವಿದ್ಯಾರ್ಥಿನಿಯು ಸಾಯುವ ಮೊದಲು ಅವಳನ್ನು ಹಿಂಸಿಸಿರುವುದಕ್ಕೆ ಅವಳ ಶವದ ಮೇಲಿದ್ದ ಗುರುತುಗಳೇ ಸಾಕ್ಷಿ. ಮಾಧ್ಯಮ ವರದಿಯಲ್ಲಿನ ಅಂಶಗಳ ಸತ್ಯಾಸತ್ಯತೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಆರೋಪ ಸಾಬೀತಾದರೆ, ಮಾನವ ಹಕ್ಕುಗಳ ಉಲ್ಲಂಘನೆಯಾಗಿರುವ ಬಗ್ಗೆ ಗಂಭೀರವಾಗಿ ಕ್ರಮ ಕೈಗೊಳ್ಳಲಾಗುವುದು' ಎಂದು ಆಯೋಗ ಹೇಳಿದೆ
'ತನಿಖೆ ಯಾವ ಹಂತದಲ್ಲಿದೆ?, ಆರೋಪಿಯ ಮೇಲೆ ಕೈಗೊಂಡಿರುವ ಕ್ರಮಗಳು, ವಿದ್ಯಾರ್ಥಿನಿಯ ಕುಟುಂಬಸ್ಥರಿಗೆ ಪರಿಹಾರವನ್ನು ನೀಡಲಾಗಿದೆಯೆ ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿಯಲ್ಲಿ ತಿಳಿಸುವಂತೆ' ಆಯೋಗವು ಸೂಚಿಸಿದೆ.