ಇಂಫಾಲ್: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಮಣಿಪುರದ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತೆಯನ್ನು ಪರಿಶೀಲಿಸಿದರು ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ಇಂಫಾಲ್: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಮಣಿಪುರದ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತೆಯನ್ನು ಪರಿಶೀಲಿಸಿದರು ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ದ್ವಿವೇದಿ ಅವರು ಮಣಿಪುರಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಿದ್ದು, ಶನಿವಾರ ಪೂರ್ವ ಸೇನಾ ಕಮಾಂಡರ್ ಅವರೊಂದಿಗೆ ಗಡಿಯಲ್ಲಿ ಭದ್ರತೆಯ ಕುರಿತು ಪರಿಶೀಲಿಸಿದರು.
ಶುಕ್ರವಾರ ಮಣಿಪುರ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರೊಂದಿಗೆ ಸಂವಾದ ನಡೆಸಿದ್ದರು. ಈ ಪ್ರದೇಶದ ಶಾಂತಿ ಸುವ್ಯವಸ್ಥೆ ಬಗ್ಗೆ ಭಾರತೀಯ ಸೇನೆಗಿರುವ ಬದ್ಧತೆ ಕುರಿತು ವಿವರಿಸಿದ್ದರು.