HEALTH TIPS

ಡೆಂಗಿ ಜ್ವರದಿಂದ ಕೇಂದ್ರ ಸಚಿವ ಜುಯಲ್ ಓರಮ್‌ ಪತ್ನಿ ಸಾವು

 ಭುವನೇಶ್ವರ: ಡೆಂಗಿ ಜ್ವರದಿಂದ ಬಳಲುತ್ತಿದ್ದ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಮ್‌ ಅವರ ಪತ್ನಿ ಜಿಂಗಿಯಾ ಓರಮ್ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಿಂಗಿಯಾ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಶನಿವಾರ ತಡರಾತ್ರಿ ಮೃತ‍ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಜುಯಲ್ ಓರಮ್‌ ಅವರೂ ಸಹ ಡೆಂಗಿ ಜ್ವರದಿಂದ ಬಳಲುತ್ತಿದ್ದು, ಇದೇ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.


ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್, ಆರೋಗ್ಯ ಸಚಿವ ಮುಖೇಶ್ ಮಹಾಲಿಂಗ್, ಸ್ಪೀಕರ್ ಸುರಮಾ ಪಾಧಿ ಸೇರಿದಂತೆ ಬಿಜೆಪಿ ನಾಯಕರು ಜಿಂಗಿಯಾ ಓರಮ್‌ಗೆ ಅಂತಿಮ ನಮನ ಸಲ್ಲಿಸಿದರು.

'ಜಿಂಗಿಯಾ ಅವರು ಧರ್ಮನಿಷ್ಠೆ, ಮೃದು ಸ್ವಭಾವದ ವ್ಯಕ್ತಿಯಾಗಿದ್ದರು. ಸಾಮಾಜಿಕ ಮತ್ತು ದತ್ತಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜುಯಲ್ ಅವರ ಸುದೀರ್ಘ ರಾಜಕೀಯ ಪಯಣದಲ್ಲಿ ಜಿಂಗಿಯಾ ಓರಮ್‌ ಅವರು ಪ್ರಮುಖ ಪಾತ್ರ ವಹಿಸಿದ್ದರು' ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ತಿಳಿಸಿದ್ದಾರೆ.

ಜಿಂಗಿಯಾ ಅವರ ಅಂತ್ಯಕ್ರಿಯೆಯು ಸುಂದರ್‌ಗಢ್ ಜಿಲ್ಲೆಯ ಅವರ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಿಂಗಿಯಾ ಓರಮ್ (58) ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

ಜುಯಲ್ ಓರಮ್‌ ಅವರು 1987ರ ಮಾರ್ಚ್ 8 ರಂದು ಜಿಂಗಿಯಾ ಅವರನ್ನು ವಿವಾಹವಾಗಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries