ನವದೆಹಲಿ: ಮೊಹಮ್ಮದ್ ಯೂನಸ್ ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮಾಹಿತಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾದ ಮೊಹಮ್ಮದ್ ಯೂನಸ್ ತಮಗೆ ಕರೆ ಮಾಡಿದ್ದು ಬಾಂಗ್ಲಾದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಮೋದಿ ಟ್ವೀಟ್ ನಲ್ಲಿ ಹೇಳಿದ್ದಾರೆ.
ಮೊನ್ನೆ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಪರಿಸ್ಥಿತಿಯು ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳುತ್ತದೆ ಎಂದು ಆಶಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. 140 ಕೋಟಿ ಭಾರತೀಯರು ನೆರೆಯ ದೇಶದಲ್ಲಿ ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಿದ್ದಾರೆ.
ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದೆ. ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಈ ವೇಳೆ ಪ್ರಧಾನಿ ಮೋದಿ ಪುನರುಚ್ಚರಿಸಿದರು. ಬಾಂಗ್ಲಾ ಸರ್ಕಾರದ ಮುಖ್ಯಸ್ಥರು ಬಾಂಗ್ಲಾದೇಶದ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯನ್ನು ಭರವಸೆ ನೀಡಿದರು" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.