HEALTH TIPS

ನಟ ನಾಗಾರ್ಜುನ ಒಡೆತನದ ಕನ್ವೆನ್ಷನ್‌ ಸೆಂಟರ್‌ ನೆಲಸಮ

           ಹೈದರಾಬಾದ್: ತೆಲುಗು ನಟ ಅಕ್ಕಿನೇನಿ ನಾಗಾರ್ಜುನ ಅವರ ಜಂಟಿ ಮಾಲೀಕತ್ವದ ಎನ್-ಕನ್ವೆನ್ಷನ್ ಸೆಂಟರ್‌ ಅನ್ನು ಕೆರೆ ಒತ್ತುವರಿ ಜಾಗದಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪದಲ್ಲಿ ನೆಲಸಮಗೊಳಿಸಲಾಯಿತು.

          ಹೈದರಾಬಾದ್‌ ವಿಕೋಪ ಸ್ಪಂದನೆ, ಆಸ್ತಿಗಳ ನಿಗಾ ಹಾಗೂ ರಕ್ಷಣಾ ಏಜೆನ್ಸಿಯ (ಹೈದ್ರಾ) ಅಧಿಕಾರಿಗಳು ಪೊಲೀಸರ ಬಿಗಿ ಬಂದೋಬಸ್ತ್‌ನೊಂದಿಗೆ ಶನಿವಾರ ಬೆಳಿಗ್ಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

             ತುಮ್ಮಿಡಿಕುಂಟಾ ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಂಡು ಎನ್-ಕನ್ವೆನ್ಷನ್ ಸೆಂಟರ್‌ ನಿರ್ಮಿಸಲಾಗಿದೆ ಎಂಬ ಆರೋಪ ಇದೆ.

            ಇಲ್ಲಿನ ಮಾದಾಪುರದಲ್ಲಿರುವ ಕನ್ವೆನ್ಷನ್‌ ಸೆಂಟರ್‌ ಎನ್‌3 ಎಂಟರ್‌ಪ್ರೈಸಸ್‌ನ ಒಡೆತನದಲ್ಲಿದೆ. ಈ ಸಂಸ್ಥೆಯು ನಾಗಾರ್ಜುನ ಮತ್ತು ನಲ್ಲಾ ಪ್ರೀತಂ ಅವರ ಜಂಟಿ ಮಾಲೀಕತ್ವದಲ್ಲಿದೆ.

ಎನ್‌- ಕನ್ವೆನ್ಷನ್‌ ಸೆಂಟರ್‌ ಅನ್ನು 2010-12ರ ಅವಧಿಯಲ್ಲಿ ನಿರ್ಮಿಸಲಾಗಿದ್ದು, ಸುಮಾರು 10 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ತುಮ್ಮಿಡಿಕುಂಟಾ ಕೆರೆಗೆ ಸೇರಿದ 1.12 ಎಕರೆ ಭೂಮಿ ಮತ್ತು ಬಫರ್‌ ವಲಯದ ಎರಡು ಎಕರೆ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ನಾಗಾರ್ಜುನ ಅವರು ಒತ್ತುವರಿ ತೆರವು ಪ್ರಕ್ರಿಯೆಗೆ ಶನಿವಾರ ಮಧ್ಯಾಹ್ನದ ವೇಳೆಗೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದರಾದರೂ, ಆ ವೇಳೆಗಾಗಲೇ ಇಡೀ ಕನ್ವೆನ್ಷನ್‌ ಸೆಂಟರ್‌ ಅನ್ನು ಕೆಡವಲಾಗಿತ್ತು.

'ನಾವು ಕಾನೂನು ಉಲ್ಲಂಘಿಸಿ ಯಾವುದೇ ನಿರ್ಮಾಣ ಕೆಲಸ ಮಾಡಿಲ್ಲ. ಕನ್ವೆನ್ಷನ್‌ ಇರುವ ಜಮೀನು ಪಟ್ಟಾ ಭೂಮಿಯಾಗಿದ್ದು, ಕೆರೆಯ ಒಂದಿಂಚು ಜಾಗವೂ ಒತ್ತುವರಿಯಾಗಿಲ್ಲ' ಎಂದು ನಾಗಾರ್ಜುನ ಅವರು 'ಎಕ್ಸ್'ನಲ್ಲಿ ಪ್ರತಿಕ್ರಿಯಿಸಿದ್ದಾರೆ.

             ನೆಲಸಮ ಕಾರ್ಯಾಚರಣೆಗೆ ಮುನ್ನ ಯಾವುದೇ ನೋಟಿಸ್‌ ಕೂಡಾ ನೀಡಿಲ್ಲ. ತಪ್ಪು ಮಾಹಿತಿಯಿಂದ ಕನ್ವೆನ್ಷನ್‌ ಸೆಂಟರ್‌ ಅನ್ನು ಕೆಡವಲಾಗಿದೆ. ಈ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries