ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ-49ರ ಆಶ್ರಯದಲ್ಲಿ ನಲ್ಕ ವಾಗ್ದೇವಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ಶ್ರೀಪತಿ ಮಾತನಾಡಿ, ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯದಲ್ಲಿ ಮಹತ್ವದ ಪಾತ್ರ ವಹಿಸುವುದು ಎಂದರು.
ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಶಿತ್ ಕೆ. ಮಾತನಾಡಿದರು. ಸ್ವಯಂ ಸೇವಕಿ ಸ್ವಾತಿ ಸ್ವಾಗತಿಸಿದರು. ರಂಜಿನಿ ವಂದಿಸಿದರು. ರೋಬಿತ್ ನಿರೂಪಿಸಿದರು. ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಾನಾ ಕ್ರೀಡೆಗಳ ಬಗ್ಗೆ ಅರಿವು ಮೂಡಿಸಲಾಯಿತು.