ಉಪ್ಪಳ: ಕೇರಳ ತುಳು ಅಕಾಡೆಮಿ ವತಿಯಿಂದ ಆ. 11 ರಂದು ಪಾವೂರು ಸಮೀಪದ ಬಚ್ಚುವಳಿಕೆ ಸ್ನೇಹಾಲಯದಲ್ಲಿ ನಡೆಯುವ ಆಟಿ ತಿಂಗಳ ವಿಶೇಷ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದಲ್ಲಿ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಸೋಮವಾರ ಬಿಡುಗಡೆಗೊಳಿಸಿ ಶುಭಹಾರೈಸಿದರು. ತುಳು ಭಾಷೆ, ಸಂಸ್ಕøತಿಯನ್ನು ಉಳಿಸಿ ಬೆಳೆಸುವ ತುಳು ಅಕಾಡೆಮಿಯ ಎಲ್ಲಾ ಕಾರ್ಯಕ್ರಮಗಳಿಗೆ ಸದಾ ಬೆಂಬಲ, ಆಶೀರ್ವಾದವಿದೆಯೆಂದರು.
ಅಕಾಡೆಮಿ ಅಧ್ಯಕ್ಷ ಕೆ.ಆರ್. ಜಯಾನಂದರವರು ಮೊದಲ ಆಮಂತ್ರಣ ಪತ್ರವನ್ನು ಸ್ವಾಮೀಜಿಯವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಅಕಾಡೆಮಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ಬಿ., ಸಾಮಾಜಿಕ ಕಾರ್ಯಕರ್ತ ವಿನಯ ಕುಮಾರ್ ಬಾಯಾರ್ ಉಪಸ್ಥಿತರಿದ್ದರು.
ಆ.11 ರಂದು ಸ್ನೇಹಾಲಯದಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನೆ ನಡೆಯಲಿದ್ದು,ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಉದ್ಘಾಟಿಸುವರು.ಅಕಾಡೆಮಿ ಅಧ್ಯಕ್ಷ ಕೆ.ಆರ್.ಜಯಾನಂದ ಅಧ್ಯಕ್ಷತೆ ವಹಿಸುವರು.ಸದಾಶಿವ ಶೆಟ್ಟಿ ಕುಳೂರು ಕನ್ಯಾನ ದೀಪ ಬೆಳಗಿಸುವರು.ರಾಜ ಬೆಳ್ಚಾಡ ಉದ್ಯಾವರ ಮಾಡ ಶುಭಹಾರೈಸುವರು. ಮಂಜೇಶ್ವರ ಗ್ರಾ.ಪಂ.ಅಧ್ಯಕ್ಷೆ ಜೀನ್ ಲವೀನೊ ಮೊಂತೆರೋ, ವರ್ಕಾಡಿ ಗ್ರಾ.ಪಂ.ಅಧ್ಯಕ್ಷೆ ಭಾರತಿ ಎಸ್, ಅಕಾಡೆಮಿ ಮಾಜಿ ಅಧ್ಯಕ್ಷ ನ್ಯಾಯವಾದಿ ಸುಬ್ಬಯ್ಯ ರೈ ಸಹಿತ ಅನೇಕ ಗಣ್ಯರು ಉಪಸ್ಥಿತರಿರುವರು.ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು, ಸ್ಪರ್ಧೆಗಳು, ತುಳುನಾಡ ವಣಸ್ ಮೊದಲಾದವುಗಳು ನಡೆದು ಸಂಜೆ 5 ರ ಬಳಿಕ ಸಮಾರೋಪ ಸಮಾರಂಭವನ್ನು ಉದುಮ ಶಾಸಕ ಸಿ,ಎಚ್ ಕುಞಂಬು ಉದ್ಘಾಟಿಸುವರು.