ಕಾಸರಗೋಡು: ಎಡನೀರಿನ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದರ ನಾಲ್ಕನೇ ವರ್ಷದ ಚಾತುರ್ಮಾಸ್ಯದ ಸಂದರ್ಭದಲ್ಲಿ ನಡೆಯುತ್ತಿರುವ ಸಾಂಸ್ಕøತಿಕ ಕಾರ್ಯಕ್ರಮಗಳ ಅಂಗವಾಗಿ ಇಂದು(ಆ.14) ಸಂಜೆ 6 ರಿಂದ ದೂರದರ್ಶನ ಕಲಾವಿದೆ ವಿದುಷಿ ಅಯನಾ ಪೆರ್ಲ ಅವರ ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.
ಯುವ ತಲೆಮಾರಿನ ಪ್ರತಿಭಾವಂತ ಕಲಾವಿದೆ ಎಂದು ಹೆಸರಾಗಿರುವ ವಿದುಷಿ ಅಯನಾ ಪೆರ್ಲ ದೆಹಲಿ, ಚೆನ್ನೈ, ಕೊಲ್ಕೊತ್ತಾ, ಹೈದರಾಬಾದ್, ಮುಂಬೈ, ಬೆಂಗಳೂರು ಮುಂತಾದೆಡೆಗಳಲ್ಲಿ ಹಲವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ ಸ್ವತಃ ನೃತ್ಯ ಸಂಯೋಜಕಿಯೂ ಆಗಿದ್ದಾರೆ.