HEALTH TIPS

ಮುಂಬೈ ದಾಳಿ | ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕದ ಕೋರ್ಟ್ ತೀರ್ಪು

 ವಾಷಿಂಗ್ಟನ್: 2008ರಲ್ಲಿ ಮುಂಬೈ ಮೇಲೆ ನಡೆದಿದ್ದ ಉಗ್ರರ ದಾಳಿಗೆ ಸಂಬಂಧಿಸಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಆದೇಶವನ್ನು ಪ್ರಶ್ನಿಸಿ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹಾವ್ವುರ್ ರಾಣಾ ಸಲ್ಲಿಸಿದ್ದ ಮೇಲ್ಮನವಿಯನ್ನು ಅಮೆರಿಕದ ಕೋರ್ಟ್ ( US Court of Appeals for the Ninth Circuit) ವಜಾಗೊಳಿಸಿದೆ.

ಭಾರತ-ಅಮೆರಿಕ ಹಸ್ತಾಂತರ ಒಪ್ಪಂದದ ಅಡಿಯಲ್ಲಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬಹುದೆಂದು ಆಗಸ್ಟ್ 15ರಂದು ಅಮೆರಿಕದ ಕೋರ್ಟ್ ತೀರ್ಪು ನೀಡಿದೆ.

ಇದರಿಂದ ತಹಾವ್ವುರ್ ರಾಣಾಗೆ ಭಾರಿ ಹಿನ್ನಡೆಯಾಗಿದೆ.

ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ರಾಣಾ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕ್ಯಾಲಿಫೋರ್ನಿಯಾದ ಜಿಲ್ಲಾ ನ್ಯಾಯಾಲಯವು ವಜಾಗೊಳಿಸಿತ್ತು. ಇದನ್ನು ಪರಿಶೀಲಿಸಿದ ಮೂವರು ನ್ಯಾಯಾಧೀಶರ ಸಮಿತಿಯು, ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಅನುಮೋದನೆ ನೀಡಿ ಆದೇಶಿಸಿದೆ.

ರಾಣಾ ವಿರುದ್ಧ ಭಾರತ ಬೇಕಾದಷ್ಟು ಪುರಾವೆಗಳನ್ನು ಒದಗಿಸಿದೆ ಎಂದು ಸಮಿತಿಯು ಉಲ್ಲೇಖಿಸಿದೆ.

2008ರ ನವೆಂಬರ್ 26ರಂದು ಮುಂಬೈ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು. ಮುಂಬೈ ದಾಳಿಯ ಒಳಸಂಚುಕೋರರಲ್ಲಿ ಒಬ್ಬನಾಗಿರುವ ರಾಣಾನನ್ನು ಒಪ್ಪಿಸಬೇಕು ಎಂದು ಭಾರತ ಕೋರಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries