: ಕರ್ನಾಟಕದಲ್ಲಿ ಅದರಲ್ಲೂ ಮೈಸೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶ. ಯಾಕೆಂದರೆ ಭಾರೀ ಸಂಬಳ ನೀಡುವ ಉದ್ಯೋಗಗಳಿಗೆ ನೇಮಕಾತಿ ಮಾಡಲು ಇದೀಗ ಅರ್ಜಿ ಕರೆಯಲಾಗಿದೆ. ಹಾಗಿದ್ರೆ, ಅರ್ಹತೆ ಏನು?, ಅರ್ಜಿ ಶುಲ್ಕ ಎಷ್ಟು ಸೇರಿದಂತೆ ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.
ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆಯಿಂದ ಅರ್ಜಿ ಆಹ್ವಾನ
ಮೈಸೂರಿನಲ್ಲಿ ಇರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಸಂಸ್ಥೆ (BRBNMPL)ಯಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ಭದ್ರತಾ ವ್ಯವಸ್ಥಾಪಕ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಿದೆ.
ಒಟ್ಟು ಹುದ್ದೆಗಳು 4 ಇದ್ದು, ಇದರಲ್ಲಿ ಸಹಾಯಕ ವ್ಯವಸ್ಥಾಪಕರು (ಭದ್ರತೆ) 3, ಭದ್ರತಾ ವ್ಯವಸ್ಥಾಪಕ 1 ಹುದ್ದೆ ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ ಹಾಗೂ ಸಂಬಳ
ಇನ್ನು ಈ ಹುದ್ದಗೆ ಅರ್ಜಿ ಸಲ್ಲಿಕೆ ಮಾಡುವವರ ವಯಸ್ಸು 45 ರಿಂದ 52 ವರ್ಷಗಳಾಗಿರಬೇಕಿದೆ. ಆಯ್ಕೆ ಆದ ನಂತರ ಸಹಾಯಕ ವ್ಯವಸ್ಥಾಪಕರು (ಭದ್ರತೆ) ಹುದ್ದೆಗೆ 56,100 ರೂ. ಗಳು ಹಾಗೂ ಭದ್ರತಾ ವ್ಯವಸ್ಥಾಪಕ ಹುದ್ದೆಗೆ 69,700 ರೂ. ಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ವಿವರ
ಇನ್ನು ಈ ಹುದ್ದೆಗಳಿಗೆ ಆಪ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಎಸ್‌ಸಿ-ಎಸ್‌ಟಿ ಅಂಗವಿಕಲ ಅಭ್ಯರ್ಥಿಗಳು ಈ ವೇಳೆ ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವ ಹಾಗಿಲ್ಲ.ಇತರೆ ಅಭ್ಯರ್ಥಿಗಳು 300 ರೂ. ಗಳನ್ನು ಡಿಮ್ಯಾಂಡ್ ಡ್ರಾಫ್ಟ್ ಅಥವಾ ಬ್ಯಾಂಕ್ ಪೇ ಆರ್ಡರ್ ಮೂಲಕ ಹಣ ಪಾವತಿ ಮಾಡಬೇಕಾಗಿದೆ.
ಇನ್ನು ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್ಲೋಡ್ ಮಾಡಿ ಅದನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಇಲಾಖೆಗೆ ಕಳುಹಿಸಿಕೊಡಬೇಕಿದೆ. ಅರ್ಜಿ ಸಲ್ಲಿಸಲು ಇಲ್ಲಿದೆ ವಿಳಾಸ
ಚೀಫ್ ಜನೆರಲ್ ಮ್ಯಾನೇಜರ್
ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಾಣ ಪ್ರವೈಟ್ ಲಿಮಿಟೆಡ್
ನಂ. 3 & 4, 1 ಸ್ಟೇಜ್, 1ನೇ ಹಂತ, ಬಿಟಿಎಂ ಲೇಔಟ್, ಬನ್ನೇರುಘಟ್ಟ ರೋಡ್
ಪೋಸ್ಟ್ ಬಾಕ್ಸ್ ನಂ. 2924, ಡಿ.ಆರ್ ಕಾಲೇಜ್ ಪಿ.ಓ., ಬೆಂಗಳೂರು-560029
ಇನ್ನು ಭರ್ತಿ ಮಾಡಿದ ಅರ್ಜಿಯನ್ನು ಪ್ಟೆಂಬರ್ 06 ರೊಳಗೆ ಇಲಾಖೆಗೆ ಕಳುಹಿಸಬೇಕು. ಕೆಲವು ಪ್ರದೇಶಗಳಿಗೆ ಸೆಪ್ಟೆಂಬರ್ 13ರವರೆಗೆ ವಿಸ್ತರಣೆ ಸಹ ಮಾಡಲಾಗಿದೆ.