ಬುಲಂದ್‌ಶಹರ್: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಒಳಗಾಗಿದ್ದ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಅಂಚೆ ಕಚೇರಿಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮೃತ ಅಧಿಕಾರಿಯನ್ನು ಬುಲಂದ್‌ಶಹರ್ ಅಂಚೆ ಕಚೇರಿಯ ಸೂಪರಿಂಟೆಂಡೆಂಟ್ ಟಿ.ಪಿ.
ಸಿಂಗ್ ಎಂದು ಗುರುತಿಸಲಾಗಿದೆ. ಸಿಂಗ್ ಇಂದು ಬೆಳಗ್ಗೆ ಅಲಿಘರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರ ಅಂಚೆ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದೇ ವೇಳೆ ಟಿ.ಪಿ. ಸಿಂಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು. ಸಿಬಿಐ ತನಿಖೆಯಿಂದ ಸಿಂಗ್ ಅಸಮಾಧಾನಗೊಂಡಿದ್ದರು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.