ನವದೆಹಲಿ: ಪರಿಸರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಇತ್ಯರ್ಥಗೊಳಿಸಲು ಎಲ್ಲ ಹೈಕೋರ್ಟ್‌ಗಳಲ್ಲಿ 'ಹಸಿರು ಪೀಠ'ಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ವಕೀಲರೊಬ್ಬರು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.

ವಕೀಲರು ಮತ್ತು ಪರಿಸರ ಹೋರಾಟಗಾರರಾದ ಆಕಾಶ್ ವಸಿಷ್ಠ ಅವರು ಈ ಪತ್ರ ಬರೆದಿದ್ದು, 'ದೇಶವು ಹಿಂದೆಂದೂ ಕಾಣದ ಪ್ರಕೃತಿ ವಿಕೋಪಗಳಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿರುವ ಹೈಕೋರ್ಟ್‌ಗಳಲ್ಲಿ ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ತ್ವರಿತ ಮತ್ತು ಪರಿಣಾಮಕಾರಿ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಒಂದು ಅಥವಾ ಅದಕ್ಕಿಂತ ಹೆಚ್ಚಿನ ಶಾಶ್ವತ 'ಹಸಿರು ಪೀಠ'ಗಳನ್ನು ಸ್ಥಾಪಿಸುವಂತೆ ಅವರು ಮನವಿ ಮಾಡಿದ್ದಾರೆ.