HEALTH TIPS

ವೈದ್ಯೆಗೆ ಲೈಂಗಿಕ ಕಿರುಕುಳ, ಹತ್ಯೆ; ಆರೋಪಿಗೆ ಕಠಿಣ ಶಿಕ್ಷೆಗೆ CM ಮಮತಾ ಮನವಿ

 ಕೋಲ್ಕತ್ತ: ನಗರದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆ ಮೇಲಿನ ಲೈಂಗಿನ ಕಿರುಕುಳ, ಹತ್ಯೆ ಪ್ರಕರಣ ಸಂಬಂಧ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ​​(ಫೋರ್ಡಾ) ಕೋಲ್ಕತ್ತದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯ ಹತ್ಯೆಗೆ ಸಂಬಂಧಿಸಿದಂತೆ 24 ಗಂಟೆಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದೆ.

ಕೃತ್ಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. 'ಈತ ಹೊರಗಿನವನು. ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಮುಕ್ತವಾಗಿ ತೆರಳುತ್ತಿದ್ದ. ಆತನ ಚಲನವಲನ ಶಂಕಾಸ್ಪದವಾಗಿದೆ. ಕೃತ್ಯದಲ್ಲಿ ಆತನ ನೇರ ಪಾತ್ರವಿರುವಂತಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎದೆರೋಗ ವಿಭಾಗದ 2ನೇ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯ ಶವವು ಅರೆನಗ್ನಾವಸ್ಥೆಯಲ್ಲಿ ಆಸ್ಪತ್ರೆ ಸೆಮಿನಾರ್‌ ಸಭಾಂಗಣದಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿತ್ತು. ದೇಹದಲ್ಲಿ ಗಾಯದ ಗುರುತುಗಳಿದ್ದವು. ಈ ವಿದ್ಯಾರ್ಥಿನಿಯು ಗುರುವಾರ ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದರು.

'ಬಂಧಿತನಿಂದ ಬ್ಲೂಟೂತ್‌ನ ಕಿತ್ತುಹೋಗಿದ್ದ ಭಾಗ ವಶಕ್ಕೆ ಪಡೆಯಲಾಗಿದೆ. ಇದರ ಸುಳಿವು ಆಧರಿಸಿಯೇ ಆತನನ್ನು ಬಂಧಿಸಲಾಗಿದೆ. ಆಸ್ಪತ್ರೆಯ ಇತರೆ ತರಬೇತಿನಿರತ ವೈದ್ಯರೂ ಸಿ.ಸಿ.ಟಿ.ವಿ ದೃಶ್ಯಾವಳಿಗಳನ್ನು ನೋಡಿ ಶಂಕಿತನನ್ನು ಗುರುತಿಸಿದ್ದಾರೆ' ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿ ಪ್ರಕಾರ, 'ವಿದ್ಯಾರ್ಥಿನಿಯ ಕೊಲೆಗೂ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯಕ್ಕೆ ಸಂಬಂಧಿಸಿದಂತೆ ಆ ದಿನ ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ತರಬೇತಿನಿರತ ವೈದ್ಯರನ್ನು ಪೊಲೀಸರು ಪ್ರಶ್ನೆಗೊಳಪಡಿಸಿದ್ದಾರೆ.

ಪ್ರಾಥಮಿಕ ವಿಚಾರಣೆಯ ವೇಳೆ ಬಂಧಿತ ಆರೋಪಿ ಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದು, ಆತನ ಜತೆಗೆ ಮತ್ತೊಬ್ಬ ಇರಬಹುದೇ ಎಂಬ ನಿಟ್ಟಿನಲ್ಲಿ ತನಿಖೆ ನಡೆದಿದೆ. ಅಗತ್ಯವಿದ್ದರೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತ್ವರಿತಗತಿ ವಿಚಾರಣೆ ಕಠಿಣ ಶಿಕ್ಷೆಗೆ ಕ್ರಮ:ಮಮತಾ ಬ್ಯಾನರ್ಜಿ

ಕೋಲ್ಕತ್ತ: 'ಆರೋಪಿಗೆ ಮರಣದಂಡನೆ ಶಿಕ್ಷೆ ಆಗಬೇಕು. ಸರ್ಕಾರ ಆ ನಿಟ್ಟಿನಲ್ಲಿ ಕ್ರಮವಹಿಸಲಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

'ತರಬೇತಿನಿರತ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ಕೊಲೆ ಕೃತ್ಯದ ವಿಚಾರಣೆಯು ತ್ವರಿತ ನ್ಯಾಯಾಲಯಲ್ಲಿ ನಡೆಯುವಂತೆ ಕ್ರಮಕೈಗೊಳ್ಳಲಾಗುವುದು' ಎಂದು ಭರವಸೆ ನೀಡಿದ್ದಾರೆ. ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಸಮರ್ಥನೀಯವಾದುದು ಎಂದು ಹೇಳಿದ್ದಾರೆ.


'ವಿದ್ಯಾರ್ಥಿಗಳ ಬೇಡಿಕೆಯನ್ನು ನಾನೂ ಅನುಮೋದಿಸುತ್ತೇನೆ. ಬೇಡಿಕೆ ಎದುರಾದರೆ ಸಿಬಿಐ ಸೇರಿದಂತೆ ಈ ಪ್ರಕರಣದ ತನಿಖೆಯನ್ನು ಯಾವುದೇ ಸಂಸ್ಥೆಗೆ ಒಪ್ಪಿಸಲು ಸರ್ಕಾರದ ಆಕ್ಷೇಪವಿರುವುದಿಲ್ಲ' ಎಂದು ಹೇಳಿದ್ದಾರೆ.

'ಇದೊಂದು ಭೀಕರ ಮತ್ತು ಹೀನಕೃತ್ಯ. ನನ್ನ ಕುಟುಂಬದ ಸದಸ್ಯರೊಬ್ಬರನ್ನೇ ಕಳೆದುಕೊಂಡಂತಾಗಿದೆ. ಪ್ರತಿಭಟನನಿರತರು ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಒದಗಿಸಲು ಆದ್ಯತೆ ನೀಡಬೇಕು' ಎಂದು ಮನವಿ ಮಾಡಿದ್ದಾರೆ.

'ವೈದ್ಯರ ಮೇಲಿನ ಹಲ್ಲೆ ತಡೆಯಲು ಪ್ರತಿ ಆಸ್ಪತ್ರೆಯಲ್ಲಿಯೂ ಪೊಲೀಸ್ ಕ್ಯಾಂಪ್‌ ಸ್ಥಾಪಿಸಲಾಗುವುದು. ವೈದ್ಯರು ಸೇರಿ ಆಸ್ಪತ್ರೆಯ ಸಿಬ್ಬಂದಿಗೆ ರಕ್ಷಣೆ ಒದಗಿಸುವುದು ಆಯಾ ಆಸ್ಪತ್ರೆಗಳ ಮುಖ್ಯಾಧಿಕಾರಿಗಳು ಪ್ರಾಂಶುಪಾಲರ ಹೊಣೆಗಾರಿಕೆಯಾಗಿದೆ' ಎಂದು ಹೇಳಿದ್ದಾರೆ.

ವೈದ್ಯ ವಿದ್ಯಾರ್ಥಿಗಳ ಆಕ್ರೋಶ ಪ್ರತಿಭಟನೆ

ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿಯ ಕೊಲೆ ಕೃತ್ಯಕ್ಕೆ ವಿದ್ಯಾರ್ಥಿ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗೆ ಕಠಿಣ ಶಿಕ್ಷೆ ಗುರಿಪಡಿಸಬೇಕೆಂದು ಆಗ್ರಹಪಡಿಸಿ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸಿದರು.

ಕಿರಿಯ ವೈದ್ಯರು ತರಬೇತಿ ನಿರತ ವೈದ್ಯರು ಸ್ನಾತಕೋತ್ತರ ವಿದ್ಯಾರ್ಥಿನಿಯರು ವೈದ್ಯೇತರ ಸಿಬ್ಬಂದಿಯು ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ನ್ಯಾಷನಲ್‌ ವೈದ್ಯಕೀಯ ಕಾಲೇಜು ಸೇರಿ ವಿವಿಧೆಡೆ ಪ್ರತಿಭಟಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ನಡೆದಿವೆ.

ಕೃತ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಕರ್ತವ್ಯದಲ್ಲಿರುವ ವೈದ್ಯರಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು. ಪ್ರ

ತಿಭಟನೆ ನಡೆದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ಸೇವೆಯು ಎಂದಿನಂತೆ ಇತ್ತು. ಎಸ್‌ಎಫ್‌ಐ ಡಿವೈಎಫ್‌ಐ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಗೆ ಕೈಜೋಡಿಸಿದ್ದುರಾಜ್ಯದ ವಿವಿಧೆಡೆ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries