ನವದೆಹಲಿ: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ನಾಯಕಿ ಕೆ.ಕವಿತಾ ಸಲ್ಲಿರುವ ಜಾಮೀನು ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶನ ನೀಡಿದೆ.
ನವದೆಹಲಿ: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ನಾಯಕಿ ಕೆ.ಕವಿತಾ ಸಲ್ಲಿರುವ ಜಾಮೀನು ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶನ ನೀಡಿದೆ.
ನ್ಯಾ.ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದೆ.
'ಕವಿತಾ 5 ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಜಾಮೀನು ಪಡೆಯಲು ಅವರು ಅರ್ಹರು' ಎಂದು ಕವಿತಾ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ಮದ್ಯ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿತಾ ಅವರನ್ನು ಬಂಧಿಸಲಾಗಿದೆ.
ಕವಿತಾ ಅವರನ್ನು ಮಾರ್ಚ್ 15ರಂದು ಇ.ಡಿ ಬಂಧಿಸಿತ್ತು. ನ್ಯಾಯಾಂಗ ಬಂಧನದಲ್ಲಿ ಇದ್ದ ಅವಧಿಯಲ್ಲೇ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಅವರನ್ನು ಸಿಬಿಐ ಬಂಧಿಸಿದೆ.