HEALTH TIPS

Kolkata rape-murder: ಆರ್‌.ಜಿ ಕರ್ ಆಸ್ಪತ್ರೆ ಸುತ್ತ ಮುತ್ತ 7 ದಿನ ನಿಷೇಧಾಜ್ಞೆ

 ಕೋಲ್ಕತ್ತ: ಇಲ್ಲಿನ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸುತ್ತ ಮುತ್ತ 7 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 (ಹಿಂದಿನ ಸಿಆರ್‌ಪಿಸಿಯ ಸೆಕ್ಷನ್ 144) ಸೆಕ್ಷನ್ 163ರ ಅನ್ವಯ ಕೋಲ್ಕತ್ತ ಪೊಲೀಸರು ನಿಷೇಧಾಜ್ಞೆ ಹೊರಡಿಸಿದ್ದಾರೆ.

ಇಂದಿನಿಂದಲೇ (ಆಗಸ್ಟ್ 18) ನಿಷೇಧಾಜ್ಞೆ ಜಾರಿಗೆ ಬರಲಿದೆ. ಈ ಪ್ರದೇಶದಲ್ಲಿ ರ್‍ಯಾಲಿ, ಸಭೆ, ಮೆರವಣಿಗೆ, ಧರಣಿ ಹಾಗೂ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ಸಭೆ ಸೇರದಂತೆ ನಿಷೇಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ವಿನೀತ್ ಕುಮಾರ್ ಗೋಯಲ್ ಅವರು ಶನಿವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ದೇಶವ್ಯಾಪಿ ಮುಷ್ಕರಕ್ಕೆ ಕೈಜೋಡಿಸಿದ ಖಾಸಗಿ ಆಸ್ಪತ್ರೆಗಳು:

ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಪ್ರಕರಣ ಖಂಡಿಸಿ ವೈದ್ಯರು ದೇಶದಾದ್ಯಂತ ಮುಷ್ಕರ ನಡೆಸಿದ್ದರಿಂದ ಶನಿವಾರ ಹಲವೆಡೆ ವೈದ್ಯಕೀಯ ಸೇವೆಯಲ್ಲಿ ಏರುಪೇರು ಉಂಟಾಗಿ ರೋಗಿಗಳು ಪರದಾಡಿದರು.

ಶನಿವಾರ ಬೆಳಿಗ್ಗೆ 6ರಿಂದ ಭಾನುವಾರ ಬೆಳಿಗ್ಗೆ 6ರವರೆಗೆ ಒಪಿಡಿ ಸೇವೆ (ಹೊರರೋಗಿಗಳ ವಿಭಾಗ) ಸ್ಥಗಿತಗೊಳಿಸುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಡಿದ್ದ ಕರೆಗೆ ದೇಶದಾದ್ಯಂತ ಉತ್ತಮ ಸ್ಪಂದನೆ ದೊರೆಯಿತು.

ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಸ್ಥಾನಿಕ ವೈದ್ಯರು ಕಳೆದ ಸೋಮವಾರದಿಂದಲೂ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಶನಿವಾರ ಖಾಸಗಿ ಆಸ್ಪತ್ರೆಗಳೂ ಬೆಂಬಲ ನೀಡಿದ್ದವು.

ರಾಷ್ಟ್ರದ ರಾಜಧಾನಿಯಲ್ಲಿ ಹಲವು ಪ್ರಮುಖ ಖಾಸಗಿ ಆಸ್ಪತ್ರೆಗಳು ಮುಷ್ಕರದಲ್ಲಿ ಕೈಜೋಡಿಸಿದವು. ಸರ್‌ ಗಂಗಾ ರಾಮ್, ಫೋರ್ಟಿಸ್‌ ಮತ್ತು ಅಪೋಲೊ ಅಸ್ಪತ್ರೆಗಳಲ್ಲಿ ಒಪಿಡಿ, ಐಪಿಡಿ ಮತ್ತು ಆಯ್ದ ಕೆಲವು ಶಸ್ತ್ರಚಿಕಿತ್ಸಾ ಸೇವೆಗಳನ್ನು ನಿಲ್ಲಿಸಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries