ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗಳಲ್ಲಿ ಉಪವರ್ಗಗಳನ್ನು ರಚಿಸಿ ದಮನಿತ ಸಮುದಾಯಗಳಿಗೆ ಕೋಟಾ ಕಲ್ಪಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದದ ತೀರ್ಪು ನೀಡಿದೆ.
ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗಳಲ್ಲಿ ಉಪವರ್ಗಗಳನ್ನು ರಚಿಸಿ ದಮನಿತ ಸಮುದಾಯಗಳಿಗೆ ಕೋಟಾ ಕಲ್ಪಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದದ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ 7 ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಪೀಠವು 6:1ರ ಅನುಪಾತದ;ಲ್ಲಿ ತೀರ್ಪು ಪ್ರಕಟಿಸಿದೆ.
ಎಸ್‌ಸಿ ಮತ್ತು ಎಸ್‌ಟಿಯಲ್ಲಿ ಉಪವರ್ಗೀಕರಣ ಮಾಡಿ, ಅಲ್ಲಿನ ಹಿಂದುಳಿದ ಸಮುದಾಯಗಳಿಗೆ ಕೋಟಾ ನೀಡಲು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬುಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪೀಠವು 6 ಪ್ರತ್ಯೇಕ ತೀರ್ಪುಗಳನ್ನು ಪ್ರಕಟಿಸಿದೆ.
ಉಪ-ವರ್ಗೀಕರಣವು ರಾಜ್ಯಗಳಿಂದ ಪ್ರಮಾಣೀಕರಿಸಬಹುದಾದ ದತ್ತಾಂಶಗಳ ಮೂಲಕ ಸಮರ್ಥಿಸಿಕೊಳ್ಳುವಂತಿರಬೇಕು. ತನ್ನ ಇಚ್ಛೆಯಂತೆ ರಾಜ್ಯ ಸರ್ಕಾರಗಳು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಬಹುಮತದ ತೀರ್ಪಿನಲ್ಲಿ ತಿಳಿಸಲಾಗಿದೆ.
2010ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಒಂದು ಅರ್ಜಿ ಸೇರಿ 23 ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ವಿಕ್ರಮ್ ನಾಥ್, ಪಂಕಜ್ ಮಿತ್ತಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಮಿಶ್ರಾ ಅವರನ್ನೂ ಒಳಗೊಂಡ ಪೀಠ ಹೇಳಿದೆ.