HEALTH TIPS

Wayanad Landslides | ಮರಳು ಕಲಾಕೃತಿ ರಚಿಸಿ ಶ್ರದ್ಧಾಂಜಲಿ ಸಲ್ಲಿಸಿದ ಕಲಾವಿದ

         ವದೆಹಲಿ: ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಸರಣಿ ಭೂಕುಸಿತ ಸಂಭವಿಸಿದೆ. ನೂರಾರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಇಂದು ಕೂಡ ಮುಂದುವರಿಸಲಾಗಿದೆ.


            ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿಯ ಸಮುದ್ರ ತೀರದಲ್ಲಿ ಕಲಾಕೃತಿಯನ್ನು ರಚಿಸುವ ಮೂಲಕ ವಯನಾಡು ಭೂಕುಸಿತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

                ಇದರ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

            ಭಾರಿ ಮಳೆಯಿಂದಾಗಿ ವಯನಾಡಿನಲ್ಲಿ ಸಂಭವಿಸಿದ್ದ ಭೂಕುಸಿತ, ಪ್ರವಾಹದಿಂದಾಗಿ ಮಕ್ಕಳು ಸೇರಿ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಬೆಟ್ಟ ಪ್ರದೇಶಗಳ ನಡುವೆ ಇದ್ದ ಮುಂಡಕ್ಕೈ, ಚೂರಲ್‌ಮಲ, ಅಟ್ಟಮಲ, ನೂಲ್ಪುಳ ಗ್ರಾಮಗಳು ಗುಡ್ಡ ಕುಸಿತದಿಂದ ಹೆಚ್ಚು ಹಾನಿಗೊಳಗಾಗಿವೆ.

           ನಿರಂತರ ಮಳೆ, ಎಲ್ಲೆಂದರಲ್ಲಿ ಹರಡಿರುವ ಕೆಸರು, ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಡಬೇಕಾದಂತೆ ಜಾರುತ್ತಿರುವ ನೆಲ ಹಾಗೂ ಇದರ ಜೊತೆಗೆ ರಭಸದಿಂದ ಹರಿಯುತ್ತಿರುವ ನದಿ - ಈ ಎಲ್ಲವೂ ರಕ್ಷಣಾ ಕಾರ್ಯಗಳಿಗೆ ಸವಾಲೊಡ್ಡಿವೆ. ಪ್ರತಿ ಸವಾಲು ಎಂಬಂತೆ ರಕ್ಷಣಾ ಕಾರ್ಯ ವೇಗವಾಗಿ ನಡೆದಿದೆ. ಭೂಕುಸಿತ ಹಾಗೂ ಪ್ರವಾಹಕ್ಕೆ ಸಿಕ್ಕಿ ನಾಪತ್ತೆಯಾದವರು ಹಾಗೂ ಅವಶೇಷಗಳ ನಡುವೆ ಬದುಕುಳಿದವರ ಪತ್ತೆಗೆ ಶೋಧ ಕಾರ್ಯ ಚುರುಕಾಗಿ ನಡೆದಿದೆ.

                ವಯನಾಡು ಜಿಲ್ಲಾಡಳಿತದ ಪ್ರಕಾರ, ಕೆಸರು, ಅವಶೇಷಗಳ ನಡುವೆ ಹಲವರು ಸಿಲುಕಿರುವ ಸಾಧ್ಯತೆ ಇದೆ. ಮೃತರ ಸಂಖ್ಯೆ ಇನ್ನಷ್ಟು ಏರಬಹುದು. ಅಂದಾಜು 200 ಜನರು ನಾಪತ್ತೆಯಾಗಿದ್ದಾರೆ. 300 ಮನೆಗಳು ಪೂರ್ಣ ನಾಶವಾಗಿವೆ. ಚೂರಲ್‌ಮಲ, ಮುಂಡಕ್ಕೈ ಗ್ರಾಮಗಳಲ್ಲಿ ಗುಡ್ಡಕುಸಿತದ ಪರಿಣಾಮ ತೀವ್ರವಾಗಿದೆ.

               ಮೃತರಲ್ಲಿ 219 ಶವಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 94 ಶವಗಳ ಗುರುತು ಪತ್ತೆಯಾಗಿದೆ. ಪತ್ತೆಯಾದ ಶವಗಳನ್ನು ಮೇಪ್ಪಾಡಿಯ ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಿಲಂಬೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ ಎಂದು ಜಿಲ್ಲಾಡಳಿತವು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries