HEALTH TIPS

ಹೈದರಾಬಾದ್ | ನವಜಾತ ಶಿಶು ಮಾರಾಟಕ್ಕೆ ಮುಂದಾದ ಪೋಷಕರು: 10 ಮಂದಿ ಬಂಧನ

 ಹೈದರಾಬಾದ್: ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದಡಿ ಪೋಷಕರು ಸೇರಿದಂತೆ 10 ಜನರನ್ನು ಬಂಧಿಸಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವಜಾತ ಶಿಶುವನ್ನು ₹2.5 ಲಕ್ಷಕ್ಕೆ ಮಾರಾಟ ಮಾಡಲು ಯತ್ನಿಸಿದ್ದ ಪೋಷಕರು ಸೇರಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದ ಪೋಷಕರು 15 ದಿನದ ಶಿಶಿವನ್ನು ಮಾರಾಟ ಮಾಡಲು ಮಧ್ಯವರ್ತಿಗಳ ಸಹಾಯ ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆಯಪ್‌ವೊಂದರ ಮೂಲಕ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಕ್ಷಿಣ ವಲಯದ ಕಮಿಷನರ್ ಟಾಸ್ಕ್ ಫೋರ್ಸ್ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಶಿಶುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries