ಕಾಸರಗೋಡು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು(ರಿ ),ಕೇರಳ ರಾಜ್ಯ ಘಟಕ, ಕಾಸರಗೋಡು ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ )ಕನ್ನಡ ಗ್ರಾಮ ಕಾಸರಗೋಡು ಇದರ ಸಹಯೋಗದಲ್ಲಿ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ-2024 ನ. 10ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ಜರುಗಲಿದೆ.
ಸಮ್ಮೇಳನ ಅಂಗವಾಗಿ ಶಾಲಾ, ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿ, ಬಹು ಭಾಷಾ ವಿದ್ಯಾರ್ಥಿಗಳ ಕವಿಗೋಷ್ಠಿ ಮತ್ತು ಮಕ್ಕಳ ಸಾಹಿತ್ಯ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.ವಿವಿಧ ಗೋಷ್ಠಿಯ ಅಧ್ಯಕ್ಷತೆಯನ್ನು ಕನ್ನಡ ವಿದ್ಯಾರ್ಥಿಗಳೇ ವಹಿಸಲಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳಾಗಿದ್ದು,ಸಾಹಿತ್ಯ, ಸಾಂಸ್ಕೃತಿಕ,ಸಾಮಾಜಿಕ, ಕ್ರೀಡಾ ಕ್ಷೇತ್ರಗಳ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಹುಮುಖ ಪ್ರತಿಭಾವಂತ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ, ಪ್ರಾಥಮಿಕ ತರಗತಿಯಿಂದ ಹೈಸ್ಕೂಲು ತನಕ,ಪ್ಲಸ್ ಟು ಅಥವಾ ಪದವಿ ಪೂರ್ವ ತನಕ, ಕಾಲೇಜು ಪದವಿ- ಸ್ನಾತಕೋತ್ತರ ತರಗತಿಗಳ ವರೆಗಿನ ವಿದ್ಯಾರ್ಥಿಗಳಿಗಾಗಿ ಸ್ವರಚಿತ, ಕಥೆ ಮತ್ತು ಕವನಗಳನ್ನು ಆಹ್ವಾನಿಸಲಾಗಿದೆ.
ಕಾಸರಗೋಡು ಜಿಲ್ಲೆ ಸಹಿತ ಕೇರಳ ರಾಜ್ಯ ಹಾಗೂ ಕರ್ನಾಟಕ ರಾಜ್ಯದ ಮಕ್ಕಳಿಂದ ಸಮೂಹ ಕನ್ನಡ ಗೀತಾ ಗಾಯನ, ಸಮೂಹ ನೃತ್ಯ, ಸಮೂಹ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಕ್ಕೆ ವೇದಿಕೆಯಲ್ಲಿ ಅವಕಾಶ ನೀಡಲಾಗುವುದು. ಪ್ರಥಮವಾಗಿ ಮಕ್ಕಳ ಹೆಸರನ್ನು ನೋಂದಾಯಿಸಿದ ಶಾಲಾ, ಕಾಲೇಜುಗಳಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗುವುದು. ಭಾಗವಹಿಸಿದ ಎಲ್ಲಾ ಪ್ರತಿನಿಧಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು.
ಈ ಬಗ್ಗೆ ಮಾಹಿತಿಗಾಗಿ ಶಿವರಾಮ ಕಾಸರಗೋಡು ಅಧ್ಯಕ್ಷರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕನ್ನಡ ಗ್ರಾಮ,ಪಾರೆಕಟ್ಟೆ ಕನ್ನಡ ಗ್ರಾಮ ರಸ್ತೆ ಕಾಸರಗೋಡು-671121, ಮೊಬೈಲ್ 9448572016.