ಮೀರತ್: ಮೂರು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿದೆ. ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.
ಮೀರತ್ | ಮೂರು ಅಂತಸ್ತಿನ ಕಟ್ಟಡ ಕುಸಿತ: ಮೃತರ ಸಂಖ್ಯೆ 10ಕ್ಕೇರಿಕೆ
0
ಸೆಪ್ಟೆಂಬರ್ 15, 2024
Tags
ಮೀರತ್: ಮೂರು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿದೆ. ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.
ಮೀರತ್‌ನ ಝಾಕಿರ್ ನಗರದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಟ್ಟಡದ ಅಡಿ ಸಿಲುಕಿದ್ದ ಹಲವರನ್ನು ರಕ್ಷಣೆ ಮಾಡಲಾಗಿದೆ.
ಮೃತರನ್ನು ಸಾಜಿದ್ (40), ಅವರ ಮಗಳು ಸಾನಿಯಾ (15), ಮಗ ಸಾಕಿಬ್ (11), ಸಿಮ್ರಾ (ಒಂದೂವರೆ ವರ್ಷ), ರೀಜಾ (7), ನಫೊ (63), ಫರ್ಹಾನಾ (20), ಅಲಿಸಾ(18), ಅಲಿಯಾ(6) ಮತ್ತು ರಿಮ್ಸಾ(5 ತಿಂಗಳು) ಎಂದು ಗುರುತಿಸಲಾಗಿದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದ್ದಿದ್ದು, ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆ ಶೋಧ ನಡೆಸುತ್ತಿವೆ.