ಶಿಮ್ಲಾ: ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಶನಿವಾರ ಬೆಳಗ್ಗೆಯಿಂದ ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಒಟ್ಟು 156 ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಶಿಮ್ಲಾ: ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಶನಿವಾರ ಬೆಳಗ್ಗೆಯಿಂದ ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಒಟ್ಟು 156 ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಪಾಲಂಪುರ್, ಮಂಡಿ, ಬೈಜನಾಥ್, ಧರ್ಮಶಾಲಾ, ಕುಫ್ರಿ, ಶಿಮ್ಲಾ, ಜೋಗಿಂದರ್ ನಗರ, ನೈನಾ ದೇವಿ, ಕಾಂಗ್ರಾದಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಮುಂದಿನ 48 ಗಂಟೆಗಳಲ್ಲಿ ಬಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಸರ್ಕಾರ ಈ ಕ್ರಮಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶಿಮ್ಲಾದಲ್ಲಿ 94, ಮಂಡಿಯಲ್ಲಿ 46 ಹಾಗೂ ಕಾಂಗ್ರಾದಲ್ಲಿ 10, ಕುಲ್ಲುವಿನಲ್ಲಿ 03 ಸೇರಿದಂತೆ ಇತರೆ ಜಿಲ್ಲೆಗಳಲ್ಲೂ ರಸ್ತೆಗಳನ್ನು ಬಂದ್ ಮಾಡಲಾಗಿದೆ.